ನಿಡ್ಪಳ್ಳಿ; ಪಾಣಾಜೆ ವಿದ್ಯಾವರ್ಧಕ ಸಂಘ, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಸುಬೋಧ ಪ್ರೌಢಶಾಲೆ ಪಾಣಾಜೆ ಇದರ ಸಹಕಾರದಲ್ಲಿ ನವೀಕರಣ ಮಾಡಲಾದ ಶಾಲೆಯ ಕಂಪ್ಯೂಟರ್ ಕೊಠಡಿಯನ್ನು ಫೆ.16 ರಂದು ಉದ್ಘಾಟಿಸಲಾಯಿತು.

ರೋಟರಿ ಜಿಲ್ಲಾ ಗವರ್ನರ್ ರಂಗನಾಥ ಭಟ್, ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಮೂಡಬಿದ್ರೆ ಅಳ್ವಾಸ್ ನರ್ಸಿಂಗ್ ಕಾಲೇಜು ಪ್ರಿನ್ಸಿಪಾಲ್ ಕುಮಾರ ಸ್ವಾಮಿ ಗೌಡ ನವೀಕೃತ ಕೊಠಡಿಯನ್ನು ಉದ್ಘಾಟಿಸಿದರು. ರೋಟರಿ ಪುತ್ತೂರು ಸಿಟಿ ಅಧ್ಯಕ್ಷ ಕೃಷ್ಣ ಮೋಹನ್ ಪಿ.ಎಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು, , ಶಿಕ್ಷಕ- ಶಿಕ್ಷಕೇತರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಸಂಚಾಲಕ ಜಿ.ಮಹಾಬಲೇಶ್ವರ ಭಟ್ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ ವಂದಿಸಿದರು. ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಇಂದಾಜೆ ಕಾರ್ಯಕ್ರಮ ನಿರೂಪಿಸಿದರು.