ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪೂರ್ವ ಅವಧಿಯಲ್ಲಿ 6 ತಿಂಗಳ ಕಾಲ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಪುತ್ತೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಿಗೆ ಪಂಚಾಯಿತಿ ವತಿಯಿಂದ ಕೃತಜ್ಞತಾಪೂರ್ವಕ ಸನ್ಮಾನ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೆ. ಅಬ್ದುಲ್ ರಹಿಮಾನ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಶ್ರೀಮತಿ ಸುಜಾತ ಕೃಷ್ಣ, ನೂತನ ಅಧ್ಯಕ್ಷೆ ಉಷಾ ಮುಳಿಯ, ಉಪಾಧ್ಯಕ್ಷ ವಿನಾಯಕ ಪೈ ಸಂದರ್ಭೋಚಿತವಾಗಿ ಮಾತನಾಡಿದರು.
ಗ್ರಾಮ ಪಂಚಾಯಿತಿಯ ನೂತನ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ಕಾರ್ಯದರ್ಶಿ ಮರಿಯಮ್ಮ ವಂದಿಸಿದರು. ಲೆಕ್ಕ ಸಹಾಯಕ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.