HomePage_Banner
HomePage_Banner
HomePage_Banner
HomePage_Banner
Breaking News

ಫಿಲೋಮಿನಾದಲ್ಲಿ ಮತದಾನದ ಮಹತ್ವ-ಜಾಗೃತಿ ಅಭಿಯಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಮತದಾನದ ದಿನ ಪ್ರಜಾಪ್ರಭುತ್ವದ ಹಬ್ಬ-ಡಾ.ಯತೀಶ್ ಉಳ್ಳಾಲ್

ಪುತ್ತೂರು: ಪ್ರಜಾಪ್ರಭುತ್ವದಲ್ಲಿ ಮತದಾನ ಎಂಬುವುದು ಪ್ರಜೆಗಳಿಗಿರುವ ಅತ್ಯಂತ ಪ್ರಬಲವಾದ ಅಸ್ತ್ರ. ತಮ್ಮ ನಾಯಕನನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಒಂದು ಅಪರೂಪದ ಅವಕಾಶವನ್ನು ಮತದಾನ ನೀಡುತ್ತದೆ. ಮತದಾನದ ದಿನವನ್ನು ಪ್ರಜಾಪ್ರಭುತ್ವದ ಹಬ್ಬ ಎಂದು ಕರೆಯುತ್ತಾರೆ ಎಂದು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್ ಹೇಳಿದರು.


ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ ಫೆ.೧೮ ರಂದು ನಡೆದ `ಮತದಾನದ ಮಹತ್ವ-ಜಾಗೃತಿ ಅಭಿಯಾನ’ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ೧೮ ವರ್ಷ ತುಂಬಿದ ಭಾರತದ ಪ್ರತಿಯೊಬ್ಬ ಪ್ರಜೆಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಂಡು ಪ್ರತಿ ಮತದಾನದಲ್ಲಿ ಮತದಾನ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವುದು ಆದ್ಯ ಕರ್ತವ್ಯವಾಗಿದೆ. ಪ್ರಪಂಚದ ಹಲವಾರು ದೇಶಗಳಲ್ಲಿ ಮತದಾನದ ಹಕ್ಕನ್ನು ಪಡೆಯಲು ಕೆಲವು ನಿಬಂಧನೆಗಳಿದ್ಧು, ಭಾರತವು ಈ ಪಟ್ಟಿಯಲ್ಲಿ ಅತ್ಯಂತ ವಿಶಿಷ್ಟವಾದ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಅದೇ ರೀತಿ ತಾವೆಲ್ಲರೂ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸುವುದರ ಜೊತೆಗೆ e- Epic ಕಾರ್ಡ್ ಗಳ ಉಪಯೋಗವನ್ನು ಕೂಡ ಪಡೆಯಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಪ್ರತಿಯೊಬ್ಬನೂ ಮತದಾನದ ಗುರುತಿನ ಚೀಟಿ ಹೊಂದಿರಬೇಕಾಗಿದ್ದು, ಪ್ರತಿ ಚುನಾವಣೆಯಲ್ಲಿಯೂ ಮತ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವದ ಗೆಲುವಿನಲ್ಲಿ ಯುವಜನತೆ ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಪುತ್ತೂರಿನ ಪ್ರೊಬೆಷನರಿ ತಹಸಿಲ್ದಾರ್ ಶ್ರೀಮತಿ ಮೋನಾ ರೋತ್ e- Epic ನ ನೋಂದಣಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಕಂದಾಯ ನಿರೀಕ್ಷಕ ಎಸ್ .ಮಹೇಶ್ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಭರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.