HomePage_Banner
HomePage_Banner
HomePage_Banner
HomePage_Banner
Breaking News

ವಿದ್ಯಾರ್ಥಿನಿಗೆ ಕೀಟಲೆ: ಆರೋಪಿ ಪೊಲೀಸ್ ವಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಕಿರುಕುಳ ನೀಡಿದ್ದು, ಬಸ್ ಚಾಲಕ ಮತ್ತು ನಿರ್ವಾಹಕ ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮೂಲತಃ ಚಿಕ್ಕಮಗಳೂರು ನಿವಾಸಿ ಮುಹಮ್ಮದ್ ಸೈಫುಲ್ಲಾ ಎಂಬಾತನೇ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವ್ಯಕ್ತಿ. ಈತ ಸುಳ್ಯದ ಅರೆಬಿಕ್ ಶಾಲೆಯೊಂದರಲ್ಲಿ ಶಿಕ್ಷಕ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿ ಕಡೆ ಆಗಮಿಸಿದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಅದೇ ಬಸ್‌ನಲ್ಲಿ ಈ ವಿದ್ಯಾರ್ಥಿನಿ ಪ್ರಯಾಣಿಸುತ್ತಿದ್ದಾಗ ಆಕೆಯ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಈತ ವಿದ್ಯಾರ್ಥಿನಿಯ ಮೈ ಮುಟ್ಟಿ ಕಿರುಕುಳ ನೀಡಿದ್ದ ಎನ್ನಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಈತನ ಕಿರುಕುಳದ ಬಗ್ಗೆ ಬಸ್ ಚಾಲಕ, ನಿರ್ವಾಹಕರ ಗಮನಕ್ಕೆ ತಂದಿದ್ದು, ಅವರು ಸೀದಾ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಸ್ ಅನ್ನು ತೆಗೆದುಕೊಂಡು ಹೋಗಿ ಈತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.