HomePage_Banner
HomePage_Banner
HomePage_Banner
HomePage_Banner

ಕಾಣಿಯೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕರಣ- ಆರೋಪಿಗೆ ನಿರೀಕ್ಷಣಾ ಜಾಮೀನು

ಕಾಣಿಯೂರು: ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಮತ್ತು ಪೇಸ್ಬುಕ್‌ಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಪ್ರಕರಣದಲ್ಲಿ ಕಾಣಿಯೂರು ಗ್ರಾ.ಪಂ, ಮಾಜಿ ಅಧ್ಯಕ್ಷೆ ಮಾಧವಿ ಕೋಡಂದೂರುರರವರಿಗೆ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ನನ್ನನ್ನು ತೇಜೋವಧೆ ಮಾಡಲಾಗಿದೆ.

ಗ್ರಾ.ಪಂ. ಚುನಾವಣೆಯ ಅಭ್ಯರ್ಥಿಯಾಗಿದ್ದ ಸಂದರ್ಭದಲ್ಲಿಯೂ ನನ್ನ ಪ್ರತಿ ಸ್ಪರ್ಧಿ ಮನೆ ಮನೆಯವರಿಗೆ ಈ ಅವಹೇಳನ ಪೋಸ್ಟನ್ನು ತೋರಿಸಿ ನನ್ನ ಹೆಸರಿನಲ್ಲಿ ತೇಜೋವಧೆ ಮಾಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿಈ ಬಗ್ಗೆ ತನಿಖೆ ನಡೆಸುವಂತೆ ಕಾಣಿಯೂರು ಗ್ರಾ.ಪಂ, ಉಪಾಧ್ಯಕ್ಷ ಗಣೇಶ್ ಉದನಡ್ಕ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿ ವರದಿ ನೀಡುವಂತೆ ನ್ಯಾಯಾಲಯ ಸೈಬರ್ ಪೋಲಿಸ್ ಠಾಣೆ ಮಂಗಳೂರು ಇವರಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಮಾಧವಿ ಕೋಡಂದೂರುರವರ ವಿರುದ್ಧ ಭಾರತೀಯ ದಂಡ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಪರ ೫ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದೆ. ಮಾಧವಿ ಕೋಡಂದೂರುರವರ ಪರ ನ್ಯಾಯಾವಾದಿ ಶ್ಯಾಮ್ ಪ್ರಸಾದ್ ಕೈಲಾರ್ ವಾದಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.