HomePage_Banner
HomePage_Banner
HomePage_Banner
HomePage_Banner

ಮಹಿಳಾ ಕಾಲೇಜಿನಿಂದ ಮಂಗಳೂರು ವಿ.ವಿ ಮಟ್ಟದ ಅಂತರ್ ಕಾಲೇಜು ಕೋಕೋ ಪಂದ್ಯಾಟ

ಪುತ್ತೂರು: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರೊಂದಿಗೆ ಕಾರ್ಯಕ್ಷಮತೆ ಸಹ ಬೆಳೆಯುತ್ತದೆ ಎಂದು ಶಾಸಕರು ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಆಗಿರುವ ಸಂಜೀವ ಮಠಂದೂರು ಹೇಳಿದರು.

 

ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ಫೆ.20ರಂದು
ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ 2020-21ನೇ ಸಾಲಿನ ಮಂಗಳೂರು ವಿ.ವಿ.ಯ ವಲಯ ಮಟ್ಟದ ಅಂತರಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ಕೋಕೋ ಪಂದ್ಯಾಟವನ್ನು ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕೋಕೋ ಸ್ಪರ್ಧೆಯು ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾಗಲಿ. ಆಟದಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಪ್ರತಿಯೊಬ್ಬರೂ ಆಟದಲ್ಲಿ ಭಾಗವಹಿಸುವ ಮನೋಭವ ಬೆಳಸಿಕೊಳ್ಳಬೇಕು. ಜೊತೆಗೆ ಕ್ರೀಡಾಪಟುಗಳು ನಿಯಮ ಉಲ್ಲಂಘನೆ ಮಾಡದೇ ನ್ಯಾಯಯುತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ಗೌಡ ಮಾತನಾಡಿ, ಕ್ರೀಡಾಪಟುಗಳು ಶಿಸ್ತು, ಸಮಯವನ್ನು ಪಾಲಿಸಬೇಕು. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ತೋರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಲಯ ಸಂಯೋಜನಾಧಿಕಾರಿ ಡಾ. ಪೋಡಿಯ, ಪುತ್ತೂರು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಜಯರಾಮ ಗೌಡ, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯೆ ಜ್ಯೋತಿ ಆರ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಲಕ್ಷ್ಮಿಕಾಂತ ರೈ ಅನಿಕೂಟೇಲ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಅಬ್ದುಲ್ ಕುಂಞಿ ವಂದಿಸಿದರು. ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ವಿವಿಧ ಹಂತಗಳಲ್ಲಿ ಕೋಕೋ ಪಂದ್ಯಾಟ ನಡೆಯಿತು.

ಮಹಿಳಾ ವಿಭಾಗದಲ್ಲಿ ಪುತ್ತೂರು ಮಹಿಳಾ ಕಾಲೇಜು, ಪುರುಷರ ವಿಭಾಗದಲ್ಲಿ ಜಿಡೆಕಲ್ಲು ಪ್ರಥಮ; ಪಂದ್ಯಾಟದ ಮಹಿಳಾ ವಿಭಾಗದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು(ಪ್ರ) ಹಾಗೂ ರಾಮಕುಂಜ ಶ್ರೀ ರಾಮಕುಂಜೇಶ್ವರ ಕಾಲೇಜು(ದ್ವಿ) ಪುರುಷರ ವಿಭಾಗದಲ್ಲಿ ಜೆಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು (ಪ್ರ) ಹಾಗೂ ರಾಮಕುಂಜ ಶ್ರೀ ರಾಮಕುಂಜೇಶ್ವರ ಕಾಲೇಜು(ದ್ವಿ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.