HomePage_Banner
HomePage_Banner
HomePage_Banner
HomePage_Banner

ಫೆ.27: ಫಿಲೋಮಿನಾದಲ್ಲಿ ತಾಲೂಕು ಪ.ಪೂ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಫೆ.27ರಂದು ಸಂತ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಜರಗಲಿದೆ.

ಅಂತರ್ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಹಾಗೂ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಉದಯ ಚೌಟರವರು ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ತಾಲೂಕು ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ಸುರೇಂದ್ರ ರೈ ನೇಸರರವರು ಭಾಗವಹಿಸಲಿದ್ದಾರೆ. ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ವಿಜಯ್ ಲೋಬೋ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಉಪಸ್ಥಿತಲಿರುವರು ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.