HomePage_Banner
HomePage_Banner
HomePage_Banner
HomePage_Banner

ವಿಟ್ಲ: ಬೈಕ್ – ಲಾರಿ ಮಧ್ಯೆ ಅಪಘಾತ – ಬೈಕ್ ಸವಾರ ಬೆಳ್ತಂಗಡಿ ಮೂಲದ ವ್ಯಕ್ತಿ ಮೃತ್ಯು – ಸಹಸವಾರ ಗಂಭೀರ

ವಿಟ್ಲ: ಬೈಕ್ ಹಾಗೂ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರೋರ್ವರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬದನಾಜೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ‌.

ಬೈಕ್ ಸವಾರ ಬೆಳ್ತಂಗಡಿ ಮಡಂತ್ಯಾರು ಮೂಲದ  ರಶೀದ್ ಮೃತಪಟ್ಟ ದುರ್ದೈವಿಯಾಗಿದ್ದು, ಸಹಸವಾರ ಮೃತರ ತಂದೆ ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಇಬ್ಬರು ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಈ ವೇಳೆ ರಶೀದ್ ಮೃತಪಟ್ಟಿದ್ದು, ಆತನ ತಂದೆ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿದ್ದವರು ಬೆಳ್ತಂಗಡಿಯ ಮಡಂತ್ಯಾರು ಅಳಕೆ ನಿವಾಸಿಗಳೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ‌.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.