ಪುಣಚ: ಪುಣಚ ಗ್ರಾಮದ ನೀರುಮಜಲು ಶ್ರೀ ಕೋಟಿ ಚೆನ್ನಯ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಬ್ರಹ್ಮ ಬೈದೆರ್ಕಳ ನೇಮೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.25ರಂದು ನಡೆಯಿತು.
ಫೆ.೨೪ರಂದು ಬೆಳಿಗ್ಗೆ ನಾಗ ತಂಬಿಲ ರಾತ್ರಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ ನಡೆಯಿತು. ಫೆ :೨೫ ರಂದು ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಶುದ್ಧ ಕಲಶಾದಿ ಹೋಮ, ತಂಬಿಲ ನಡೆದು ರಾತ್ರಿ ಶ್ರೀ ಬೈದರ್ಕಳ ಗರಡಿ ಇಳಿಯುವ ಕಾರ್ಯಕ್ರಮ, ಆಯುಧ ಒಪ್ಪಿಸುವುದು, ಮಾಯಂದಾಳ್ ದೇವಿಯ ಉತ್ಸವ, ಪೂಜಾರಿಗಳ ಸೇಟು, ಬೈದೆರ್ಕಳ ಸೇಟು ನಡೆದು ಫೆ.೨೬ರ ಮುಂಜಾನೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಸಾವಿರಾರು ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಊರ ಹಾಗು ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು. ಗರಡಿಯ ಆಡಳಿತ ಮೋಕ್ತೇಸರರುಗಳಾದ ಸಂಕಪ್ಪ ಪೂಜಾರಿ ನೀರುಮಜಲು, ಸೀತಾರಾಮ ಪೂಜಾರಿ ನೀರುಮಜಲು, ನಾರಾಯಣ ಪೂಜಾರಿ ನೀರುಮಜಲು, ನವೀನ ಪೂಜಾರಿ ನೀರುಮಜಲು ಅಥಿತಿಗಳನ್ನು ಭಕ್ತಾದಿಗಳನ್ನು ಸ್ವಾಗತಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರವೀಣ್ ಜಯ ವಿಟ್ಲ ಮತ್ತು ಬಳಗದವರಿಂದ ನೃತ್ಯ ಸಂಗೀತಗಳ ವೈವಿಧ್ಯಮಯ ನೃತ್ಯಗಾನ ಸಂಭ್ರಮ ಕಾರ್ಯಕ್ರಮ ನಡೆಯಿತು.