HomePage_Banner
HomePage_Banner
HomePage_Banner
HomePage_Banner

ಕೆಂಪುಹೊಳೆ: ಕಾಡಾನೆ ದಾಳಿಗೆ ಲಾರಿ ಚಾಲಕ ಬಲಿ


ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕರೋರ್ವರು ಮೃತಪಟ್ಟ ಘಟನೆ ಫೆ.೨೫ರಂದು ಸಂಜೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರವಿಸರ್ಜನೆಗೆಂದು ಹೋಗಿದ್ದ ವೇಳೆ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಆನೆ ದಾಳಿಯಿಂದಾಗಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಈತ ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ. ಸಕಲೇಶಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮೃತದೇಹವನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೆಂಪುಹೊಳೆ ಪ್ರದೇಶದಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ್ದು ಇದರಿಂದಾಗಿ ವಾಹನ ಸಂಚಾರದಲ್ಲೂ ಅಡಚಣೆ ಉಂಟಾಗಿದ್ದು ವಾಹನ ಸವಾರರು ಭಯಭೀತರಾಗಿ ವಾಹನ ಓಡಾಟ ನಡೆಸುತ್ತಿರುವುದಾಗಿ ವರದಿಯಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.