HomePage_Banner
HomePage_Banner
HomePage_Banner
HomePage_Banner

ಮಾ.13ಕ್ಕೆ ಉಡುಪಿಯ ಕೋಟತಟ್ಟುವಿನಲ್ಲಿ ಕ್ರೀಡೋತ್ಸವ, ಸಾಂಸ್ಕೃತಿಕ ಸ್ಪರ್ಧೆಗಳು | ಪುತ್ತೂರು ಸ್ಥಳಿಯಾಡಳಿತ ಪ್ರತಿನಿಧಿಗಳಿಗೆ ತಾ.ಪಂನಲ್ಲಿ ಆಹ್ವಾನ

ಪುತ್ತೂರು: ಉಡುಪಿ ಹಾಗೂ ದ.ಕ. ಜಿಲ್ಲಾ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಕೋಟತಟ್ಟು ಗ್ರಾ.ಪಂ ವ್ಯಾಪ್ತಿಯ ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ಮಾ.13ರಂದು ನಡೆಯುವ 5ನೇ ವರ್ಷದ ಕ್ರೀಡಾ ಸಾಂಸ್ಕೃತಿಕ ಉತ್ಸವ ‘ಹೊಳಪು’ ಕಾರ್ಯಕ್ರಮಕ್ಕೆ ಪುತ್ತೂರು ಸ್ಥಳೀಯಾಡಳಿತವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಆಹ್ವಾನಿಸಲಾಯಿತು.

ಕೊಟತಟ್ಟು ಗ್ರಾ.ಪಂ ಉಪಾಧ್ಯಕ್ಷ ವಾಸು ಪೂಜಾರಿ ಮತ್ತು ಸಚಿವರ ಆಪ್ತ ಸಹಾಯಕ ಪರಮೇಶ್ವರ ಅವರು ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರಿಗೆ ಆಮಂತ್ರಣ ಪತ್ರ ನೀಡುವ ಮೂಲಕ ಆಹ್ವಾನಿಸಿದರು. ಕಳೆದ ಬಾರಿಯ ಕ್ರೀಡೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ ತಂಡ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಈ ಭಾರಿಯ ಕ್ರೀಡಾ ಜ್ಯೋತಿಯನ್ನು ಉಪ್ಪಿನಂಗಡಿ ಗ್ರಾ.ಪಂ ತಂಡ ಬೆಳಗಿಸಲಿದೆ ಎಂದು ಮಾಹಿತಿ ನೀಡಿದರು. ತಾ.ಪಂ ಸದಸ್ಯರಾದ ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ್, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ತಾ.ಪಂ ಯೋಜನಾಧಿಕಾರಿ ಶೈಲಜಾ ಭಟ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.