HomePage_Banner
HomePage_Banner
HomePage_Banner
HomePage_Banner

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಜ್ಞಾನ ವೇದಿಕೆ ಉದ್ಘಾಟನೆ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಚನೆ ಮಾಡಿರುವ ಜ್ಞಾನ ವೇದಿಕೆಯ ಉದ್ಘಾಟನಾ ಸಮಾರಂಭವು ನಡೆಯಿತು.

ದೀಪ ಬೆಳಗಿಸುವುದರೊಂದಿಗೆ ಈ ಕಾರ್ಯಕ್ರಮ ಉದ್ಘಾಟಿಸಿದ  ಸತೀಶ್ ಭಟ್ ಪ್ರಾಂಶುಪಾಲರು ,ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ರಾಮಕುಂಜ, ರವರು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯು ವಿಭಿನ್ನ ವಾದಂತಹ ಪ್ರತಿಭೆ ಇರುತ್ತದೆ. ಅದಕ್ಕೆ ಸೂಕ್ತವಾದ ವೇದಿಕೆ ದೊರಕಿದಾಗ ಮಾತ್ರ ಪ್ರತಿಭೆಗಳು ಅಭಿವ್ಯಕ್ತಗೊಳ್ಳುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಜ್ಞಾನ ವೇದಿಕೆಯನ್ನು ಸಮರ್ಪಕವಾಗಿ ಬಳಸಿಕೊಂಡು ಮುನ್ನಡೆಸಿರಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಸಂಕೀರ್ತ್ ಹೆಬ್ಬಾರ್ ಪ್ರಾಂಶುಪಾಲರು, ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ,ರವರು ಸಂದರ್ಭೋಚಿತವಾಗಿ ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ದಿವಾಕರ್ . ಕೆ ,IQAC ಸಂಯೋಜಕರು ಹಾಗೂ  ರೇವತಿ .ಬಿ, ಉಪನ್ಯಾಸಕಿ ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಸಂಯೋಜಿಸಿದ ಇತಿಹಾಸ ಉಪನ್ಯಾಸಕಿಯಾದ  ಸುಜಾತಾ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೀಪಿಕಾ ಬಿ ,ದ್ವಿತೀಯ ಬಿಎ ಕಾರ್ಯಕ್ರಮ ನಿರೂಪಿಸಿದರು. ತೃತೀಯ ಬಿಎ ಸುಶ್ಮಿತಾ ಸ್ವಾಗತಿಸಿದರು. ತೃತೀಯ ಬಿಎ ಗುರುಪ್ರಸಾದ್ ರವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.