HomePage_Banner
HomePage_Banner
HomePage_Banner
HomePage_Banner

ಫೆ.28: ಕುಂಭಶ್ರೀ ಕುಲಾಲ ಫ್ರೆಂಡ್ಸ್‌ನಿಂದ ಕುಲಾಲ ಟ್ರೋಫಿ

ಪುತ್ತೂರು : ಪುತ್ತೂರು ಕುಂಭಶ್ರೀ ಕುಲಾಲ ಫ್ರೆಂಡ್ಸ್ ವತಿಯಿಂದ ಭಾಸ್ಕರ ಎಂ ಪೆರುವಾಯಿಯವರ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಉಡುಪಿ, ಕಾಸರಗೋಡು ಹಾಗೂ ಕೊಡಗು ಜಿಲ್ಲಾಮಟ್ಟದ ಕುಲಾಲ ಟ್ರೋಫಿ ಫೆ.೨೮ರಂದು ಬೆಳಿಗ್ಗೆ ನೆಹರೂನಗರ ಸುದಾನ ವಸತಿಯುತ ಶಾಲಾ ಮೈದಾನದಲ್ಲಿ ನಡೆಯಲಿದೆ. ಪುರುಷರಿಗೆ ಕಬಡ್ಡಿ, ವಾಲಿಬಾಲ್, ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದ್ದು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಉಪಾಧ್ಯಕ್ಷ ದಾಮೋದರ ವಿ.ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ೫.೩೦ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕುಂಬಾರರ ಗುಡಿಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ. ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.