HomePage_Banner
HomePage_Banner
HomePage_Banner
HomePage_Banner

ಬಾ ಗುರು ದೇಶ ಕಟ್ಟೋಣ ರಾಜ್ಯ ಮಟ್ಟದ ಜಾಗೃತಿ ಅಭಿಯಾನದ ಉದ್ಘಾಟನೆ

ಪುತ್ತೂರು: ನ್ಯಾಯವಾದಿ ಶೈಲಜಾ ಅಮರನಾಥರವರ ಸಾರಥ್ಯದಲ್ಲಿ ರಾಜ್ಯಮಟ್ಟದ ಬಾ ಗುರು ದೇಶ ಕಟ್ಟೋಣ ಜಾಗೃತಿ ಅಭಿಯಾನದ ಉದ್ಘಾಟನೆಯು ಫೆ.27ರಂದು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಸುನೀಲ್ ಕುಮಾರ್ ಹೆಬ್ರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಖ್ಯಾತ ಪತ್ರಕರ್ತ ರಾಚಿಂತನ್, ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ ವೀರಸಂಗಯ್ಯ, ಕೆಪಿಸಿಸಿ ವಕ್ತಾರೆ ಕವಿತಾ ರೆಡ್ಡಿ, ಐವೈಸಿ ಸಾಮಾಜಿಕ ಜಾಲತಾಣದ ರಾಜ್ಯ ಮುಖ್ಯಸ್ಥ ಎಚ್.ಡಿ ದರ್ಶನ್ ಗೌಡ, ಸೌಗಂಧಿಕಾ ರಂಗನಾಥ, ರಂಗನಾಥ ಹೆಬ್ರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮೊದಲಾದವರು ಮಾತನಾಡಿದರು.

ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ತಾ.ಪಂ ಸದಸ್ಯ ಪರಮೇಶ್ವರ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ತಾ.ಪಂ ಸದಸ್ಯೆ ಕೆ.ಟಿ ವಲ್ಸಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್ ಪಾಣಾಜೆ, ನಗರ ಸಭಾ ಮಾಜಿ ಸದಸ್ಯ ಮಹಮ್ಮದ್ ಅಲಿ, ಎ.ಕೆ ಜಯರಾಮ ರೈ, ಕೊಳ್ತಿಗೆ ಗ್ರಾ.ಪಂ ಅಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ, ಸತೀಶ್ ಕುಮಾರ್ ಕೆಡೆಂಜಿ, ಪ್ರವೀಣ್ ಕೆಡೆಂಜಿ, ನ್ಯಾಯವಾದಿ ಭಾಸ್ಕರ ಕೋಡಿಂಬಾಳ, ಎಂ.ಬಿ ವಿಶ್ವನಾಥ ರೈ, ಬೋಲೋಡಿ ಚಂದ್ರಹಾಸ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಲ್ಯಾನ್ಸಿಮಸ್ಕರೇನಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಷದ್ ದರ್ಬೆ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಸಹಿತ ಹಲವು ಮಂದಿ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಂಜುಳಾ ನಾಯಕ್ ಪ್ರಾರ್ಥಿಸಿದರು. , ಮೊಹಮ್ಮದ್ ಗಝಾಲಿ ಕಾರ್ಯಕ್ರಮ ನಿರೂಪಿಸಿದರು. 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.