HomePage_Banner
HomePage_Banner
HomePage_Banner
HomePage_Banner

ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಕ್ಕೆ ತುಕ್ರಪ್ಪ ಶೆಟ್ಟಿ ರಾಜೀನಾಮೆ

ನೆಲ್ಯಾಡಿ: ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸ್ಥಾನಕ್ಕೆ ತುಕ್ರಪ್ಪ ಶೆಟ್ಟಿ ನೂಜೆಯವರು ರಾಜೀನಾಮೆ ನೀಡಿದ್ದಾರೆ.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಧರ್ಮಸ್ಥಳ ಮುಂಡ್ರುಪ್ಪಾಡಿಯ ಹರೀಶ್ ರಾವ್, ತುಕ್ರಪ್ಪ ಶೆಟ್ಟಿ ನೂಜೆ, ಯಶೋಧಉಮೇಶ್ ಪೂಜಾರಿ ಕೊಕ್ಕಡ, ಹೇಮಲತಾ ಶಿವಾನಂದ ಗೌಡ ಕೊಕ್ಕಡ, ಪುರಂದರ ಗೌಡ ಕಡೀರ, ಪ್ರಶಾಂತ್ ಗೌಡ ಪೂವಾಜೆ, ವಿಠಲ ಎಂ.ಕೆ.ಕುರ್‍ಲೆ ಧರ್ಮಸ್ಥಳ, ನವೀನ್ ಕಜೆ ಪಟ್ಟೂರುರವರು ಸೇರಿದಂತೆ ೯ ಮಂದಿಯನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರನ್ನಾಗಿ ನೇಮಕಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಧರ್ಮಸ್ಥಳ ಮುಂಡ್ರುಪ್ಪಾಡಿಯ ಹರೀಶ್ ರಾವ್‌ರನ್ನು ಆಯ್ಕೆಯೂ ಮಾಡಲಾಗಿತ್ತು. ಈ ಮಧ್ಯೆ ಸಾಮಾನ್ಯ ಸ್ಥಾನದಿಂದ ಸದಸ್ಯರಾಗಿ ಆಯ್ಕೆಗೊಂಡಿದ್ದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರು ಫೆ.೨೭ರಂದು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಸಮಯ ದೇವಸ್ಥಾನದ ಅಭಿವೃದ್ಧಿಗಾಗಿ ಮತ್ತು ವ್ಯವಸ್ಥಾಪನಾ ಸಮಿತಿಯೊಂದಿಗೆ ಪಾಲ್ಗೊಳ್ಳಲು ಕಷ್ಟ ಸಾಧ್ಯವಾಗಿರುವುದರಿಂದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಆಡಳಿತಾಧಿಕಾರಿಯವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ತುಕ್ರಪ್ಪ ಶೆಟ್ಟಿಯವರು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ದೇವಸ್ಥಾನದ ಕೆಲಸಕ್ಕೆ ಸಮಯ ನೀಡಲು ಆಗುತ್ತಿಲ್ಲ:
ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದು ದೇವಸ್ಥಾನದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯ ಆಗುತ್ತಿಲ್ಲ. ಆದ್ದರಿಂದ ವ್ಯವಸ್ಥಾಪನಾ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತುಕ್ರಪ್ಪ ಶೆಟ್ಟಿಯವರು ‘ಸುದ್ದಿ’ಗೆ ತಿಳಿಸಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.