HomePage_Banner
HomePage_Banner
HomePage_Banner
HomePage_Banner

ಹೊಸಮಠ ಅವೈಜ್ಞಾನಿಕ ಹಂಪ್ ಗೆ ಮಹಿಳೆ ಬಲಿ

ಕಡಬ: ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ನಿಂದಾಗಿ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಫೆ.28ರಂದು ಬೆಳ್ಳಂಬೆಳಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ವೇಣೂರಿನ ಬಜಾಲು ಸಮೀಪದ ವಿರಂದಲೆ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ(65) ಎಂದು ಗುರುತಿಸಲಾಗಿದೆ. ಮೃತ‌ ಮಹಿಳೆಯು ತನ್ನ ಮೊಮ್ಮಗನೊಂದಿಗೆ ಭಾನುವಾರ ಬೆಳಗಿನ ಜಾವ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಬೆಳಿಗ್ಗೆ 6.30ರ ಸುಮಾರಿಗೆ ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ಬೈಕ್ ಸ್ಕಿಡ್ ಆಗಿದ್ದು, ರಸ್ತೆಗೆಸೆಯಲ್ಪಟ್ಟ ಸುಂದರಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.