HomePage_Banner
HomePage_Banner
HomePage_Banner
HomePage_Banner

ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಇಂದಿರಾ ಕ್ಯಾಂಟಿನ್ ಮುಚ್ಚುವ ಹುನ್ನಾರವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ನೇತೃತ್ವದಲ್ಲಿ ಪುತ್ತೂರು ಅಮರ್‌ಜವಾನ್ ಸ್ಮಾರಕ ಜ್ಯೋತಿ ಬಳಿ ಮಾ.1ರಂದು ಪ್ರತಿಭಟನೆ ನಡೆಯಿತು. ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಮಾಲಾರ್ಪಣೆ ಮಾಡಿ ಕೃಷಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಆತ್ಮಕ್ಕೆ ಚಿರಶಾಂತಿ ಕರುಣಿಸಲು ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಿ ಪ್ರತಿಭಟನೆ ಆರಂಭಿಸಲಾಯಿತು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಡು ಜಗನ್ನಾಥ ರೈ, ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ, ಎಂ ಬಿ ವಿಶ್ವನಾಥ ರೈ, ಫಝಲ್ ರಹಿಮಾನ್, ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ನಗರಸಭೆ ಸದಸ್ಯರಾದ ರಿಯಾಜ್, ರಾಬಿನ್ ತಾವ್ರೋ, ಸಂತೋಷ್ ಭಂಡಾರಿ, ಪರಮೇಶ್ವರ ಭಂಡಾರಿ, ಡಾ.ರಾಜರಾಮ್, ಹೆಚ್ ಮಹಮ್ಮದ್ ಆಲಿ, ರೋಶನ್ ರೈ ಬನ್ನೂರು, ಕೃಷ್ಣ ಪ್ರಸಾದ್ ಆಳ್ವ ಸೇರಿದಂತೆ ಹಲವಾರು‌ ಮಂದಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.