HomePage_Banner
HomePage_Banner
HomePage_Banner
HomePage_Banner

ಕಾಮಗಾರಿಗೆ ವೇಗ ಕೊಡಿ, 2 ತಿಂಗಳೊಳಗೆ ಮುಗಿಸಿ: ನಗರಸಭೆ ಜಲಸಿರಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರ ಸೂಚನೆ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ ಜಲಸಿರಿ ಯೋಜನೆಯ ಕಾಮಗಾರಿಗೆ ವೇಗ ಕೊಡಬೇಕು ಮತ್ತು ೨ ತಿಂಗಳೊಳಗೆ ಪೈಪ್ ಲೈನ್ ಅಳವಡಿಸುವ ಕಾಮಗಾರಿ ಪೂರ್ಣಗೊಳಿಸಬೇಕೆಂದು ಶಾಸಕ ಸಂಜೀವ ಮಠಂದೂರು ಅವರು ಕೆಯುಐಡಿಎಫ್‌ಸಿ ಜಲಸಿರಿ ಯೋಜನಾ ಇಂಜಿನಿಯರ್‌ಗಳಿಗೆ ಸೂಚಿಸಿದರು.

ಪುತ್ತೂರು ನಗರಸಭೆ ಮತ್ತು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್‌ಸಿ) ಇವರ ಜಂಟಿ ಸಹಯೋಗದಲ್ಲಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ ಜಲಸಿರಿ ಯೋಜನೆಯ ಕಾಮಗಾರಿ ಕುರಿತು ನಗರಸಭೆ ಕಚೇರಿ ಮೀಟಿಂಗ್ ಹಾಲ್‌ನಲ್ಲಿ ಮಾ.೨ರಂದು ನಡೆದ ಜಲಸಿರಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯುಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ನಗರಸಭಾ ಸದಸ್ಯರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಪೈಪ್ ಅಳವಡಿಕೆ ಕಾಮಗಾರಿ ವೇಳೆ ಆಗಿರುವ ತೊಂದರೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಪೌರಾಯುಕ್ತೆ ರೂಪಾ ಶೆಟ್ಟಿ, ಕೆಯುಐಡಿಎಫ್‌ಸಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಾದೇಶ್ ಸೇರಿದಂತೆ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.