HomePage_Banner
HomePage_Banner
HomePage_Banner
HomePage_Banner

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಉಪ್ಪಿನಂಗಡಿ ಪ.ಪೂ. ಕಾಲೇಜು ತಂಡ ಕಬಡ್ಡಿಯಲ್ಲಿ ಪ್ರಥಮ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ

ಉಪ್ಪಿನಂಗಡಿ: ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ಕಬಡ್ಡಿ ಪಂದ್ಯಾಟದ ಬಾಲಕರ ವಿಭಾಗದಲ್ಲಿ ತಂಡ ಪ್ರಥಮ ಸ್ಥಾನ ಮತ್ತು ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತದೆ ಎಂದು ಕಾಲೇಜಿನ ಪ್ರಾಚಾರ್ಯ ಸುಧೀರ್ ಕುಮಾರ್ ಎಂ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಬಡ್ಡಿ ಪಂದ್ಯದಲ್ಲಿ ಉತ್ತಮ ದಾಳಿಗಾರನಾಗಿ ಮಿಥುನ್ ಎಂ.ಎಸ್. ಹಾಗೂ ಉತ್ತಮ ಹಿಡಿತಗಾರನಾಗಿ ಹಸನ್ ಮಹಮ್ಮದ್ ನಿಶಾನ್ ಆಯ್ಕೆ ಆಗಿರುತ್ತಾರೆ. ದೈಹಿಕ ಶಿಕ್ಷಣ ಉಪನ್ಯಾಸಕ ಪುನೀತ್ ಕೆ. ಹಾಗೂ ಸತ್ಯನ್ ಮತ್ತು ಕರುಣಾಕರ ಶೆಟ್ಟಿ ಇವರು ತರಬೇತಿ ನೀಡಿರುತ್ತಾರೆ. ತಂಡದ ವ್ಯವಸ್ಥಾಪಕರಾಗಿ ಉಪನ್ಯಾಸಕ ಇಬ್ರಾಹಿಂ ಎಂ. ಭಾಗವಹಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ:
ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ. ಈ ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪುನೀತ್ ಕೆ. ಹಾಗೂ ಮನೋಜ್ ಇವರು ತರಬೇತಿ ನೀಡಿರುತ್ತಾರೆ. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಆಶಾ ತಂಡದ ವ್ಯವಸ್ಥಾಪಕರಾಗಿ ಭಾಗವಹಿಸಿರುತ್ತಾರೆ ಎಂದು ಕಾಲೇಜಿನ ಪ್ರಾಚಾರ್ಯ ಸುಧೀರ್ ಕುಮಾರ್ ಎಂ. ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.