ಉಪ್ಪಿನಂಗಡಿ: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ಉಪ್ಪಿನಂಗಡಿಯಲ್ಲಿರುವ ‘ನೊರ್ಟಾನ್ ಸೋಲಾರ್’ ಸಂಸ್ಥೆಯ ವತಿಯಿಂದ ಅಳವಡಿಸಲಾಗಿರುವ ಸ್ವಯಂ ಚಾಲಿತ ಸೋಲಾರ್ ಪಂಪ್ ಪ್ರಾತ್ಯಕ್ಷಿಕೆ ಮಾ.3ರಂದು ಬೆಳಿಗ್ಗೆ ನಡೆಯಲಿದೆ.
ಶಾಸಕ ಸಂಜೀವ ಮಠಂದೂರುರವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೋಡಿಂಬಾಡಿ ಗ್ರಾ.ಪಂ.ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಸದಸ್ಯರು ಭಾಗವಹಿಸಲಿದ್ದಾರೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸ್ವಯಂಚಾಲಿತ ಸೋಲಾರ್ ಪಂಪ್ ಅಳವಡಿಕೆ ಮಾಡಲಾಗಿದ್ದು ರೈತರು ಪ್ರಾತ್ಯಕ್ಷತೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.