HomePage_Banner
HomePage_Banner
HomePage_Banner
HomePage_Banner

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ತಹಶಿಲ್ದಾರರಿಂದ ಮತದಾರರ ಜಾಗೃತಿ ಕಾರ್ಯಕ್ರಮ

ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಫೆ.20ರಂದು ಜರುಗಿತು. ಮತದಾರರ ಜಾಗೃತಿ ಕುರಿತು ಮಾಹಿತಿ ನೀಡಿದ ಪ್ರೊಬೇಷನರಿ ತಹಶೀಲ್ದಾರ್ ಮೋನಾ ರೋತ್ ಮಾತನಾಡಿ, ಮತದಾನ ಮಾಡಲು ಅರ್ಹರಿರುವ ಯುವ ಸಮುದಾಯ ಮತದಾನದ ಮಹತ್ವ ತಿಳಿದು. ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಚುನಾವಣಾ ಕಛೇರಿಯ ನಾಗೇಶ್ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಚಾಲಕ ಹರಿಪ್ರಸಾದ್ ಎಸ್ ಸ್ವಾಗತಿಸಿದರು. ಮತದಾರರ ಸಾಕ್ಷರತಾ ಸಂಘದ ಸಂಚಾಲಕ ದಾಮೋದರ ಕಣಜಾಲು ವಂದಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಕುಮಾರಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.