ಪುತ್ತೂರು: ಉಪ್ಪಿನಂಗಡಿ ಸಮೀಪ ಅಕ್ರಮ ಕೂಟದ ತಂಡವೊಂದು ಮನೆ ವಠಾರಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಮಂದಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆಂದು ಅರೋಪಿಸಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಗಾಯಾಳು ಮುಕುಂದ ಅವರು ನಡೆದ ವಿಚಾರವನ್ನು ಶಾಸಕರಲ್ಲಿ ವಿವರಿಸಿದರು. ಈ ಸಂದರ್ಭ ಅಟ್ಟಹಾಸ ಮೆರೆದ ಪುಂಡರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಉಪಸ್ಥಿತರಿದ್ದರು.