HomePage_Banner
HomePage_Banner
HomePage_Banner
HomePage_Banner

ಮಾ.8-9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನಲ್ಲಿ ಪ್ರತಿಷ್ಠಾವರ್ಧಂತಿ, ಜಾತ್ರೋತ್ಸವದ ಸಂಭ್ರಮ

ಪುತ್ತೂರು: ಮುಂಡೂರು ಗ್ರಾಮದ ಪಜಿಮಣ್ಣು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರೀದೇವರ ಪ್ರತಿಷ್ಠಾವರ್ಧಂತಿ ಹಾಗೂ ಜಾತ್ರೋತ್ಸವ ಮತ್ತು ದೈಮಗಳ ನೇಮೋತ್ಸವ ಮಾ.8 ಹಾಗೂ 9ರಂದು ವಿಧಾನಗಳೊಂದಿಗೆ ಬ್ರಹ್ಮಶ್ರೀ ವೇ.ಮೂ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ನಡೆಯಲಿದೆ.

ಮಾ.೭ರಂದು ಸಂಜೆ ೫ ಗಂಟೆಗೆ ಹೊರೆಕಾಣಿಕೆ, ಉಗ್ರಾಣ ಮುಹೂರ್ತ, ರಾತ್ರಿ ರಂಗಪೂಜೆ ನಡೆಯಲಿದೆ. ಮಾ.೮ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ನಾಗಸನ್ನಿಧಿಯಲ್ಲಿ ಆಶ್ಲೇಷಬಲಿ ಪೂಜೆ, ನಾಗತಂಬಿಲ, ದೈವಗಳಿಗೆ ತಂಬಿಲ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆಯುವುದು, ಬಳಿಕ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಬೆಡಿಮದ್ದು ಪ್ರದರ್ಶನ, ಶ್ರೀದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಉಳ್ಳಾಕುಲು, ರಕ್ತೇಶ್ವರಿ, ವ್ಯಾಘ್ರಚಾಮುಂಡಿ, ವರ್ಣಾರ ಪಂಜುರ್ಲಿ, ಬೊಟ್ಟಿಭೂತ ಹಾಗೂ ಗುಳಿಗ ದೈವದ ನೇಮ ನಡೆಯಲಿದೆ.

ಮಾ.೯ರಂದು ಕಲಶ, ಆರಾಧನೆ, ಮಧ್ಯಾಹ್ನ ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎ ಮತ್ತು ಬಿ ಒಕ್ಕೂಟ, ನವೋದಯ ಸ್ವ ಸಹಾಯ ಗುಂಪುಗಳ ಒಕ್ಕೂಟ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ ಮುಂಡೂರು, ಶಾಲಾಭಿವೃದ್ಧಿ ಸಮಿತಿ ಮುಂಡೂರು, ಹನುಮಾನ್ ಯುವ ವೇದಿಕೆ ಮುಂಡೂರು ಹಾಗೂ ಶ್ರೀ ಸುಬ್ರಾಯ ಭಜನಾ ಮಂಡಳಿ ಪಜಿಮಣ್ಣ ಜಾತ್ರೋತ್ಸವದಲ್ಲಿ ಸಹಕರಿಸಲಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.