ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತಲಪಾಡಿ ಶಾರದಾ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ತಲಪಾಡಿ ಶಾರದಾ ವಿದ್ಯಾನಿಕೇತನ ಕಾಲೇಜಿನಲ್ಲಿ ಜರಗಿದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟ್ನಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರನ್ನರ್ಸ್ ಪ್ರಶಸ್ತಿಯನ್ನು ಗಳಿಸಿದ್ದಾರೆ.
ದ್ವಿತೀಯ ಪಿಸಿಎಂಬಿ`ಎ’ ವಿಭಾಗದ ವಿದ್ಯಾರ್ಥಿನಿ ರಶ್ಮಿ ಜೆ.ಕೆ, ದ್ವಿತೀಯ ಕಲಾ ವಿಭಾಗದ ಶಾಂತೇರಿ ಶೆಣೈ, ಪ್ರಥಮ ಪಿಸಿಎಂಬಿ`ಇ’ ವಿಭಾಗದ ಮರೀನ ಜೇನ್ ಮೊಂತೇರೋರವರು ಟೇಬಲ್ ಟೆನ್ನಿಸ್ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದು, ಈ ಪೈಕಿ ರಶ್ಮಿ ಜೆ.ಕೆರವರು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಟೂರ್ನಮೆಂಟಿಗೆ ಆಯ್ಕೆಯಾಗಿರುತ್ತಾರೆ ಹಾಗೂ ಟ್ವೆಕಾಂಡೋ ಪಂದ್ಯದಲ್ಲಿ ಪ್ರಥಮ ಪಿಸಿಎಂಸಿ ವಿಭಾಗದ ದರ್ಶನ್ ಎ.ಎಲ್, ಮೌರ್ಯ ಸಿ.ಎಸ್ರವರು ಭಾಗವಹಿಸಿದ್ದು, ದರ್ಶನ್ ಎ.ಎಲ್ರವರು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟೂರ್ನಮೆಂಟ್ಗೆ ಆಯ್ಕೆಯಾಗಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.