HomePage_Banner
HomePage_Banner
HomePage_Banner
HomePage_Banner

ತಾಲೂಕು ಮಟ್ಟದ ವಾಲಿಬಾಲ್ ಟೂರ್ನಮೆಂಟ್ | ಫಿಲೋಮಿನಾ ಪಿಯು ವಿನ್ನರ್ಸ್, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಶ್ರಯದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಜರಗಿದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿನ್ನರ್ಸ್ ಪ್ರಶಸ್ತಿಯನ್ನು ಗಳಿಸಿದ್ದಾರೆ.

ತಂಡದಲ್ಲಿ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಸುಜಿತ್ ಎಸ್‌ಪಿ, ವಿದ್ವಾನ್ ಕೆ.ಪಿ, ಗೌರವ್ ಎಸ್.ಪವಾರ್, ಮೊಹಮ್ಮದ್ ಝಾಯಿದ್, ದ್ವಿತೀಯ ವಿಜ್ಞಾನ ವಿಭಾಗದ ಯತೀಶ್ ಕುಮಾರ್, ಪ್ರಥಮ ವಾಣಿಜ್ಯ ವಿಭಾಗದ ಅಬ್ದುಲ್ ಖಾದರ್, ಮೊಹಮ್ಮದ್ ಸೈಫು ಸೈಲ್, ಸುಧೀಂದ್ರ, ಮೊಹಮ್ಮದ್ ಬಾದಿರ್, ಮೊಹಮ್ಮದ್ ರಾಹಿಲ್, ಮೊಹಮ್ಮದ್ ಸಫಾಜ್, ಪ್ರಥಮ ಕಲಾ ವಿಭಾಗದ ಹರ್ಷಿತ್ ಎ, ಪ್ರಥಮ ವಿಜ್ಞಾನ ವಿಭಾಗದ ಅಫ್ರೀಜ್ ಇಬ್ರಾಹಿಂರವರು ಭಾಗವಹಿಸಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಮಾರ್ಚ್ 16ರಂದು ಉಜಿರೆ ಎಸ್‌ಡಿಂಎ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಕಾಲೇಜು ತಂಡ ಅರ್ಹತೆ ಗಳಿಸಿರುತ್ತದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.