HomePage_Banner
HomePage_Banner
HomePage_Banner
HomePage_Banner

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಲುವಾಗಿ ಏ.1 ರಂದು ಗೊನೆ ಮುಹೂರ್ತ ನೆರವೇರಿಸಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಪ್ರಧಾನ ಅರ್ಚಕರೂ ಆಗಿರುವ ವಿ.ಎಸ್ ಭಟ್ ಅವರು ಗೊನೆ ಮುಹೂರ್ತ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ‌ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರು, ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇತಿಹಾಸ ಪ್ರಸಿದ್ದ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಲುವಾಗಿ ಏ.೧ ರಂದು ಗೊನೆ ಮುಹೂರ್ತ ನೆರವೇರಿಸಲಾಯಿತು. ಕೋವಿಡ್ ನಿಯಮವಾಳಿಯಂತೆ ಸೀಮಿತ ಮಂದಿಯ ಭಕ್ತರು ಮಾಸ್ಕ್ ಧರಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ದೇವಳದ ಎದುರು ಭಾಗದ ಎಡಭಾಗದಲ್ಲಿರುವ ಕಂಬಳಕೋಡಿ ಮೋನಪ್ಪ ಸಪಲ್ಯರವರ ಮನೆಯ ತೋಟದಿಂದ ಗೊನೆಗೆ ಪೂಜೆ ನೆರವೇರಿಸಿ ಮುಹೂರ್ತ ಮಾಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಪ್ರಧಾನ ಅರ್ಚಕರೂ ಆಗಿರುವ ವೇ ಮೂ. ವಿ.ಎಸ್.ಭಟ್‌ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರಾಮ್ ದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ.ಕೆ, ಡಾ.ಸುಧಾ ಎಸ್ ರಾವ್, ಬಿ ಐತ್ತಪ್ಪ ನಾಯ್ಕ, ರಾಮಚಂದ್ರ ಕಾಮತ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಮಾಜಿ ಆಡಳಿತ ಮೊಕ್ತೇಸರ ಎನ್ ಕೆ ಜಗನ್ನಿವಾಸ ರಾವ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.