ಉಪ್ಪಿನಂಗಡಿ: ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉಮಾನಾಥ ಶೆಟ್ಟಿಯವರನ್ನು ನೇಮಕಗೊಳಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಆದೇಶಿಸಿದ್ದಾರೆ.
ಪೆರ್ನೆ ಗ್ರಾಮದ ಸಂಪಿಗೆ ಕೋಡಿ ನಿವಾಸಿ ಆಗಿರುವ ಉಮಾನಾಥ ಶೆಟ್ಟಿಯವರು ಪೆರ್ನೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ, ಪೆರ್ನೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಪೆರ್ನೆ ಸಹಕಾರಿ ಸಂಘದ ನಿರ್ದೇಶಕರಾಗಿ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಧರ್ಮಸ್ಥಳ ಜನ ಜಾಗೃತಿ ವೇದಿಕೆ ಸದಸ್ಯರಾದಿಯಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.