HomePage_Banner
HomePage_Banner
HomePage_Banner
HomePage_Banner

ರಾಮಕುಂಜ: ಸಂಸ್ಕೃತ ಉಪನ್ಯಾಸಕರಿಗೆ ಬೀಳ್ಕೊಡುಗೆ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಧೀಂದ್ರ ಇವರಿಗೆ ಬೀಳ್ಕೊಡುಗೆ ಸಮಾರಂಭ ಮಾ.೩೦ರಂದು ನಡೆಯಿತು.

ಪ್ರಾಂಶುಪಾಲ ಎಂ.ಸತೀಶ ಭಟ್‌ರವರು ಗೌರವಿಸಿ ಶುಭಹಾರೈಸಿದರು. ಉಪನ್ಯಾಸಕ ಸುಧೀಂದ್ರರವರು ಅಭಿನಂದನೆ, ಸನ್ಮಾನಗಳನ್ನು ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉತ್ತಮ ಅಂಕಗಳನ್ನು ಸಾಧಿಸುವುದೇ ಗುರುಗಳಿಗೆ ಸಲ್ಲಿಸುವ ಕಾಣಿಕೆಯಾಗಿದೆ ಎಂದು ಹೇಳಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ವಿದ್ಯಾರ್ಥಿಗಳೂ ಉಪನ್ಯಾಸಕರಿಗೆ ಕಿರುಕಾಣಿಕೆ ಸಲ್ಲಿಸಿದರು. ಇಂಗ್ಲೀಷ್ ಉಪನ್ಯಾಸಕ ಹರಿನಾರಾಯಣ ಆಚಾರ್ಯರವರು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿಯರಾದ ಮಯೂರಿ ಹಾಗೂ ಶ್ರೇಯಾ ಸಿ.ಎಚ್. ಪ್ರಾರ್ಥಿಸಿದರು. ಉಪನ್ಯಾಸಕರು ಹಾಗೂ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.