HomePage_Banner
HomePage_Banner
HomePage_Banner
HomePage_Banner

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಬಾಲಕಿಯರ ತಂಡ ವಿನ್ನರ್‍ಸ್, ನೀಲ್ ವೈಯಕ್ತಿಕ ಚಾಂಪಿಯನ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪರ್ಲಡ್ಕ ಬಾಲವನ ಈಜುಕೊಳದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಎನಿಸಿಕೊಂಡಿದೆ.

ಬಾಲಕಿಯರ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಜೆ.ರೈರವರು ೧೦೦ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಳ್ಳಿ, ೨೦೦ಮೀ. ವೈಯಕ್ತಿಕ ಮೆಡ್ಲೇಯಲ್ಲಿ ಚಿನ್ನ, ೪*೧೦೦ಮೀ. ಫ್ರೀ ಸ್ಟೈಲ್ ರಿಲೇ ಹಾಗೂ ೧೦೦ಮೀ. ಫ್ರೀ ಸ್ಟೈಲ್‌ನಲ್ಲಿ ಚಿನ್ನದ ಪದಕ, ಪ್ರಥಮ ವಾಣಿಜ್ಯ ವಿಭಾಗದ ಶಾಂತೇರಿ ಶಣೈಯವರು ೫೦ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಳ್ಳಿ, ೧೦೦ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚು, ೪*೧೦೦ಮೀ ಮೆಡ್ಲೇ ರಿಲೇ ಹಗೂ ೪*೧೦೦ಮೀ ಫ್ರೀ ಸ್ಟೈಲ್ ರಿಲೇಯಲ್ಲಿ ಚಿನ್ನದ ಪದಕ, ದ್ವಿತೀಯ ವಿಜ್ಞಾನ ವಿಭಾಗದ ವಾಸವಿ ರೈಯವರು ೫೦ಮೀ. ಹಾಗೂ ೧೦೦ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ ಚಿನ್ನ, ೫೦ಮೀ. ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ, ಪ್ರಥಮ ವಿಜ್ಞಾನ ವಿಭಾಗದ ಅನನ್ಯ ಕೆ.ಎಸ್‌ರವರು ೪*೧೦೦ ಮೆಡ್ಲೆ ಹಾಗೂ ಫ್ರೀ ಸ್ಟೈಲ್ ರಿಲೇಯಲ್ಲಿ ಚಿನ್ನ, ೧೦೦ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ನೀಲ್ ಮಸ್ಕರೇನ್ಹಸ್‌ರವರು ೧೦೦ಮೀ. ಬ್ರೆಸ್ಟ್ ಸ್ಟ್ರೋಕ್, ೨೦೦ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನ, ೨೦೦ಮೀ. ವೈಯಕ್ತಿಕ ಮೆಡ್ಲೇಯಲ್ಲಿ ಚಿನ್ನ, ೪*೧೦೦ ಮೆಡ್ಲೆ ರಿಲೇಯಲ್ಲಿ ಚಿನ್ನ, ೪*೧೦೦ ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ ಪದಕ ಪಡೆದಿದ್ದು, ವೈಯಕ್ತಿಕ ವಿಭಾಗದಲ್ಲಿ ಚಾಂಪಿಯನ್ ಎನಿಸಿಕೊಂಡಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ಅಂಕಿತ್ ಗೌಡರವರು ೧೦೦ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಳ್ಳಿ, ೫೦ಮೀ., ೧೦೦ಮೀ. ಬ್ರೆಸ್ಟ್ ಸ್ಟ್ರೋಕ್ ಹಾಗೂ ೪*೧೦೦ಮೀ. ಮೆಡ್ಲೆ ರಿಲೇಯಲ್ಲಿ ಚಿನ್ನ, ೪*೧೦೦ಮೀ. ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ ಪದಕ, ಪ್ರಥಮ ವಿಜ್ಞಾನ ವಿಭಾಗದ ಸಾತ್ವಿಕ್‌ರವರು ೫೦ಮೀ. ಬ್ರೆಸ್ಟ್ ಸ್ಟ್ರೋಕ್, ೪*೧೦೦ಮೀ. ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ, ೧೦೦ಮೀ ಫ್ರೀಸ್ಟೈಲ್, ೨೦೦ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚು, ೪*೧೦೦ಮೀ. ಮೆಡ್ಲೇ ರಿಲೇಯಲ್ಲಿ ಚಿನ್ನ ಪದಕ, ಪ್ರಥಮ ವಾಣಿಜ್ಯ ವಿಭಾಗದ ತನ್ವೀರ್ ಪಿಂಟೋರವರು ೧೫೦ಮೀ. ಫ್ರೀ ಸ್ಟೈಲ್, ೧೦೦ಮೀ. ಬ್ಯಾಕ್ ಸ್ಟ್ರೋಕ್, ೪*೧೦೦ಮೀ. ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ, ೪*೧೦೦ಮೀ. ಮೆಡ್ಲೆ ರಿಲೇಯಲ್ಲಿ ಚಿನ್ನ, ೫೦ಮೀ. ಬಟರ್‌ಫ್ಲೈಯಲ್ಲಿ ಕಂಚಿನ ಪದಕ ಪಡೆದುಕೊಂಡಿರುತ್ತಾರೆ.

 

ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಶಿ, ನಿರೂಪ್ ಜಿ.ಆರ್, ರೋಹಿತ್ ಪ್ರಕಾಶ್, ದೀಕ್ಷಿತ್, ವಸಂತ್ ಕುಮಾರ್, ಸೀತಾರಾಮ್‌ರವರು ತರಬೇತಿ ನೀಡಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲ್ವರು ರಾಜ್ಯ ಮಟ್ಟಕ್ಕೆ ಆಯ್ಕೆ..
ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆಗೈದ ಈಜುಪಟುಗಳಾದ ಬಾಲಕರ ವಿಭಾಗದಲ್ಲಿ ನೀಲ್ ಮಸ್ಕರೇನ್ಹಸ್, ಅಂಕಿತ್ ಗೌಡ ಹಾಗೂ ಬಾಲಕಿಯರ ವಿಭಾಗದಲ್ಲಿ ಧನ್ವಿ ಜೆ.ರೈ, ವಾಸವಿ ರೈಯವರು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ತೇರ್ಗಡೆ ಹೊಂದಿರುತ್ತಾರೆ. ರಾಜ್ಯ ಮಟ್ಟದ ಈಜು ಸ್ಪರ್ಧೆಯು ಬೆಂಗಳೂರು ನಾರ್ತ್‌ನಲ್ಲಿ ಜರಗಲಿದೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.