HomePage_Banner
HomePage_Banner
HomePage_Banner
HomePage_Banner

ಕೋಲ್ಪೆ ಬಿಜೆಎಂ ಗೌರವಾಧ್ಯಕ್ಷ ಹಾಜಿ ಬಿ.ಎಸ್.ಅಬ್ದುಲ್ಲಾ ತಂಙಳ್ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಕೊಣಾಲು ಗ್ರಾಮದ ಕೋಲ್ಪೆ ತಂಙಳ್ ಕಾಟೇಜ್ ನಿವಾಸಿ, ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಗೌರವಾಧ್ಯಕ್ಷ ಹಾಜಿ ಬಿ.ಎಸ್.ಅಬ್ದುಲ್ಲಾ ತಂಙಳ್(೯೮೦ವ.)ರವರು ಅನಾರೋಗ್ಯದಿಂದ ಎ.೩ರಂದು ಬೆಳಿಗ್ಗೆ ನಿಧನರಾದರು.

 


ಬೆಳಿಗ್ಗೆ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದ ಹಾಜಿ ಬಿ.ಎಸ್.ಅಬ್ದುಲ್ಲಾ ತಂಙಳ್‌ರವರನ್ನು ಮನೆಯವರು ಕೂಡಲೇ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ದುರಾದರೂ ಆ ವೇಳೆಗೆ ಅವರ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಹಾಜಿ ಬಿ.ಎಸ್.ಅಬ್ದುಲ್ಲಾ ತಂಙಳ್‌ರವರು ಕೋಲ್ಪೆ ಬದ್ರಿಯಾ ಜುಮಾ ಮಸೀದಿಯಲ್ಲಿ ಖತೀಬರಾಗಿ, ನಂತರ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ, ಲೆಕ್ಕಪರಿಶೋಧಕರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಮಸೀದಿ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದ ಅವರು ಮಾ.೨೪ರಿಂದ ೨೭ರ ತನಕ ನಡೆದ ಕೋಲ್ಪೆ ಮಖಾಂ ಉರೂಸ್ ಮತ್ತು ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಮೃತರು ೧೧ ಮಂದಿ ಪುತ್ರರು, ಐವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಮನೆಗೆ ಜಿ.ಪಂ.ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್, ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ, ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಎಂ.ಆದಂ, ಕಾರ್ಯದರ್ಶಿ ಯು.ಕೆ.ಉಮ್ಮರ್ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಹಲವು ಸಾದಾತ್‌ಗಳು, ಉಲಮಾ, ಉಮಾರಾ ನೇತಾರರು ಸೇರಿದಂತೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.