HomePage_Banner
HomePage_Banner
HomePage_Banner
HomePage_Banner

ಕೆ.ವಿ.ಜಿ.ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಸುರೇಖಾ ಮೋಂಟಡ್ಕರವರಿಗೆ ಡಾಕ್ಟರೇಟ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಶ್ರೀಮತಿ ಸುರೇಖಾ ಎಂ. ರವರ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ವಿ.ಟಿ.ಯು ಮಂಗಳೂರು ವಿಭಾಗದ ವಿಶೇಷಾಧಿಕಾರಿ ಡಾ. ಶಿವಕುಮಾರ್ ಹೊಸೊಳಿಕೆರವರ ಮಾರ್ಗದರ್ಶನದಲ್ಲಿ“ “Studies on effect of Dielectric constant on Electrical Conductivity and Acoustic behaviour of a few Industrially Important Electrolytes in 2-ethoxy ethanol+Water Mixtures” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.

ಶ್ರೀಮತಿ ಸುರೇಖಾರವರು ಸುಮಾರು ೧೮ ವರ್ಷಗಳಿಂದ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಏ.೩ರಂದು ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಶ್ರೀಮತಿ ಸುರೇಖಾರವರು ಡಾಕ್ಟರೇಟ್ ಪದವಿ ಸ್ವೀಕರಿಸಿದರು. ಇವರನ್ನು ಎ.ಒ.ಎಲ್.ಇ.ಯ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ., ನಿರ್ದೇಶಕಿ ಡಾ.ಜ್ಯೋತಿ ಆರ್.ಪ್ರಸಾದ್ ಹಾಗೂ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅಭಿನಂದಿಸಿರುತ್ತಾರೆ. ಶ್ರೀಮತಿ ಸುರೇಖಾರವರು ಕಡಬ ತಾಲೂಕಿನ ದೋಳ್ಪಾಡಿ ದಿ.ಪಟೇಲ್ ಗಣಪಯ್ಯ ಗೌಡ ಹಾಗೂ ಶ್ರೀಮತಿ ಗಂಗಮ್ಮ ದೋಳ್ಪಾಡಿಯವರ ಸೊಸೆ. ಪ್ರಸ್ತುತ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ನೆಲೆಸಿರುವ ಇವರು ಯಶವಂತ ದೋಳ್ಪಾಡಿಯವರ ಪತ್ನಿ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.