HomePage_Banner
HomePage_Banner
HomePage_Banner
HomePage_Banner

ಇರ್ದೆ: 17 ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ:  ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಶ್ರೀ ಗೋಪಾಲ ಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಪ್ರಗತಿ ಬಂಧು, ಸ್ವ- ಸಹಾಯ ಸಂಘಗಳ ಒಕ್ಕೂಟ ಕಕ್ಕೂರು, ಬೆಟ್ಟಂಪಾಡಿ, ದೂಮಡ್ಕ, ಪೇರಲ್ತಡ್ಕ, ಅಜ್ಜಿಕಲ್ಲು, ಉಪ್ಪಳಿಗೆ, ಗುಮ್ಮಟೆಗದ್ದೆ ಇವುಗಳ ಸಹಕಾರದೊಂದಿಗೆ 17 ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಏ.4 ರಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ  ನಡೆಯಿತು.


ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಪೂಜಾ ಸಮಿತಿ ಅಧ್ಯಕ್ಷ ನಾರಾಯಣ ಪಾಟಾಳಿ ದೆಯ್ಯರಡ್ಕ ವಹಿಸಿದ್ದರು. ಸುದ್ದಿ ಬಿಡುಗಡೆ ವರದಿಗಾರ ಉಮೇಶ್ ಮಿತ್ತಡ್ಕ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ವಿಷ್ಣುಮೂರ್ತಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಇದರ ಯೋಜನಾಧಿಕಾರಿ ಆನಂದ.ಕೆ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ದೆಯ್ಯರಡ್ಕ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ರೈ ಬೈಲಾಡಿ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಬೆಟ್ಟಂಪಾಡಿ ವಲಯದ ಅಧ್ಯಕ್ಷ ನವೀನ್ ಕುಮಾರ್. ಎಂ, ಪೂಜಾ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ರೈ ಬೈಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಕ್ಕೂರು ಒಕ್ಕೂಟದ ಅಧ್ಯಕ್ಷ ಲಕ್ಷ್ಮೀನಾರಾಯಣ ರೈ ಸ್ವಾಗತಿಸಿ, ವಿಜಯಲಕ್ಷ್ಮಿ ಎಸ್.ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಸಮಿತಿ ಕಾರ್ಯದರ್ಶಿ ಜಗದೀಶ್ ಸಿ.ಚೆಲ್ಯಡ್ಕ ವರದಿ ವಾಚಿಸಿದರು.ಕೃಷ್ಣ ನಾಯ್ಕ ಬಳ್ಳ ವಂದಿಸಿ,  ಶಿಕ್ಷಕಿ ನಮಿತಾ ಬೈಲಾಡಿ ಕಾರ್ಯಕ್ರಮ ನಿರೂಪಿಸಿದರು.ವೇದ ಮೂರ್ತಿ ರಾಧಾಕೃಷ್ಣ ಭಟ್ ಕೋಡಿ ನೇತೃತ್ವದಲ್ಲಿ ಪೂಜಾ ವಿಧಿ ವಿದಾನ ನಡೆಯಿತು. ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು, ಸೇವಾ ಪ್ರತಿನಿಧಿಗಳು ಪಾಲ್ಗೊಂಡರು.
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.