ಸವಣೂರು: ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಕು. ಅನನ್ಯಲಕ್ಷ್ಮಿ ಇವರು೨೦೧೯-೨೦ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಎಂ.ಕಾಂ ಸ್ನಾತ್ತಕೋತ್ತರ ಪದವಿಯಲ್ಲಿ ೮ನೇ ರ್ಯಾಂಕ್ ಪಡೆದಿರುತ್ತಾರೆ.
ವಡ್ಯ ಶ್ರೀಕಷ್ಣ ಭಟ್ ಮತ್ತು ಮಂಗಳಗೌರಿ ದಂಪತಿಯ ಇವರ ಪುತ್ರಿಯಾಗಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿಯಲ್ಲಿ ತಮ್ಮ ಸ್ನಾತ್ತಕೋತ್ತರ ಪದವಿಯನ್ನು ಪೂರೈಸಿದ್ದು,ಬಿ.ಕಾಂ ಪದವಿಯನ್ನು ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿ ಪೂರೈಸಿದ್ದು, ಬಿ.ಕಾಂ ನಲ್ಲಿಯೂ ೪ನೇ ರ್ಯಾಂಕ್ ಪಡೆದಿರುತ್ತಾರೆ.
ಇವರನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ , ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್ ರೈ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.