ಪುತ್ತೂರು: ವಿಟ್ಲ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಪದವಿ ಪೂರ್ವ ಜಿಲ್ಲಾ ಮಟ್ಟದ ಟೆನ್ನಿಕಾಯಿಟ್ ಟೂರ್ನಮೆಂಟ್ನಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ರನ್ನರ್ಸ್ ಪ್ರಶಸ್ತಿ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿ ಕ್ರೀಡಾಪಟುಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೆ.ನಿಶ್ಚಯ್ ಕುಡ್ವ, ವಿದ್ವಾನ್ ಕೆ.ಪಿ, ಅಂಕಿತ್ ಒ.ಎಸ್, ಝಾಹಿದ್ ಪಿ.ಎಚ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಚೋಂದಮ್ಮ ಕೆ.ಪಿ.ರವರು ಭಾಗವಹಿಸಿದ್ದರು. ಈ ಪೈಕಿ ಬಾಲಕರ ವಿಭಾಗದಲ್ಲಿ ಕೆ.ನಿಶ್ಚಯ್ ಕುಡ್ವ ಹಾಗೂ ಬಾಲಕಿಯರ ವಿಭಾಗದಲ್ಲಿ ಚೋಂದಮ್ಮರವರು ಕೋಲಾರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಟೆನ್ನಿಕಾಯಿಟ್ ಟೂರ್ನಮೆಂಟ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.