HomePage_Banner
HomePage_Banner
HomePage_Banner
HomePage_Banner

2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ – ಕಡಬ ತಾಲೂಕಿನ ಶಿರಾಡಿ ಗ್ರಾ.ಪಂ ಗೆ ರಾಜ್ಯಪ್ರಶಸ್ತಿ

ಪುತ್ತೂರು: 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕಡಬ ತಾಲೂಕಿನ ಶಿರಾಡಿ ಗ್ರಾ.ಪಂ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿದೆ. 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೆಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಅಧಿಕಾರಿ/ಸಿಬ್ಬಂದಿಗಳು/ಕಾಯಕ ಬಂಧು/ಇತರ ವ್ಯಕ್ತಿಗಳನ್ನು ನಾಮ ನಿರ್ದೇಶನ ಮಾಡುವಂತೆ ಉಲ್ಲೇಖದಲ್ಲಿನ ಪತ್ರದಲ್ಲಿ ಕೋರಲಾಗಿತ್ತು. ಅದರಂತೆ, ಜಿಲ್ಲಾ ಪಂಚಾಯತಿಗಳಿಂದ ಸ್ವೀಕೃತವಾದ ನಾಮ ನಿರ್ದೇಶನಗಳನ್ನು ಪರಿಶೀಲಿಸಿ ಉತ್ತಮ ಸಾಧನೆ ಮಾಡಿದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಇತರ ವ್ಯಕ್ತಿಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶಿರಾಡಿ ಗ್ರಾ.ಪಂ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ. ಅಲ್ಲಿನ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯದಲ್ಲಿ ಸುಮಾರು ೩೦ ಕ್ಕೂ ಮಿಕ್ಕಿ ಗ್ರಾ.ಪಂ ಪ್ರಶಸ್ತಿಗೆ ಆಯ್ಕೆಯಾಗಿದೆ. ಎ.9ರಂದು ಹುಬ್ಬಳ್ಳಿಯ ಹೊಟೇಲ್ ಡೆನಿಸನ್ಸ್ ನಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.