HomePage_Banner
HomePage_Banner
HomePage_Banner
HomePage_Banner

ವಿವಿ ಮಟ್ಟದಲ್ಲಿ ಉಪ್ಪಿನಂಗಡಿ ಕಾಲೇಜಿಗೆ ಪ್ರಥಮ ರ್‍ಯಾಂಕ್

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸುರಕ್ಷಿತ ಶೆಟ್ಟಿ ಎನ್. ಅವರು ಕನ್ನಡ ಎಂ.ಎ. ಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ನೊಂದಿಗೆ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಸ್ಮಾರಕ ಚಿನ್ನದ ಪದಕ ಸಹಿತ ಐದು ಇತರೆ ನಗದು ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.

ಈ ಮೂಲಕ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಲೇಜಿಗೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಗಳಿಸಿ ಕೊಟ್ಟ ವಿದ್ಯಾರ್ಥಿನಿ ಎಂಬ ಕೀರ್ತಿಗೆ ಇವರು ಪಾತ್ರರಾಗಿದ್ದಾರೆ. ಪ್ರಸ್ತುತ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಸುರಕ್ಷಿತ ಶೆಟ್ಟಿ ಇವರು ಕಡಬ ನಂದಗುರಿಯ ಈಶ್ವರ ಶೆಟ್ಟಿ ಮತ್ತು ಶ್ರೀಮತಿ ದೇವಕಿ ಶೆಟ್ಟಿ ದಂಪತಿಯ ಪುತ್ರಿ. ಇವರೊಂದಿಗೆ ಇದೇ ಕಾಲೇಜಿನ ಸವಿತಾ ,ಮಧುಶ್ರೀ ಮತ್ತು ಪ್ರಮೀಳಾ ಅವರು ಕನ್ನಡ ಎಂ ಎ ಯಲ್ಲಿ ಅತ್ಯಧಿಕ ಅಂಕಗಳೊಂದಿಗೆ ವಿಶ್ವವಿದ್ಯಾನಿಲಯದ ವಿವಿಧ ನಗದು ಪುರಸ್ಕಾರಗಳನ್ನು ಗಳಿಸಿಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ. ಸುಬ್ಬಪ್ಪ ಕೈಕಂಬ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.