HomePage_Banner
HomePage_Banner
HomePage_Banner
HomePage_Banner

ಫಿಲೋಮಿನಾ ಪಿಯು ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಪ್ರಗತಿ ಪರಿಶೀಲನಾ ಸಂವಹನ ಪ್ರಕ್ರಿಯೆ

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ವಾಣಿಜ್ಯ, ವಿಜ್ಞಾನ, ಕಲಾ ವಿಭಾಗಗಳ ವಿದ್ಯಾರ್ಥಿಗಳ ದ್ವಿತೀಯ ಹಂತದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಂವಹನ ಪ್ರಕ್ರಿಯೆಯು ಏ.೮ ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವಾಣಿಜ್ಯ, ವಿಜ್ಞಾನ, ಕಲಾ ವಿಭಾಗಗಳ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳ ಹೆತ್ತವರು ತಮ್ಮ ಮಕ್ಕಳ ಶೈಕ್ಷಣಿಕ ಸಾಲಿನ ಪ್ರಗತಿ ಬಗ್ಗೆ ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಹೆತ್ತವರು ಒಮ್ಮಿಂದೊಮ್ಮೆ ಗುಂಪಾಗಿ ಸೇರಬಾರದು, ಕಡ್ಡಾಯ ಮಾಸ್ಕ್ ಧರಿಸಿ ಬರುವಂತೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಹೆತ್ತವರು ಅಥವಾ ಪೋಷಕರು ಉಪನ್ಯಾಸಕರನ್ನು ಭೇಟಿಯಾಗಲು ಇಂತಿಷ್ಟೇ ಸಮಯದಲ್ಲಿ ಆಗಮಿಸುವಂತೆ ಮೊದಲೇ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ತಿಳಿಸಿದ್ದರು. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಸಂಸ್ಥೆ ತಿಳಿಸಿದ ಸಮಯಕ್ಕೆ ಸರಿಯಾಗಿ ಮಾಸ್ಕ್ ಧರಿಸುವ ಮೂಲಕ ಆಗಮಿಸಿ ವಿದ್ಯಾರ್ಥಿಗಳ ಉಪನ್ಯಾಸಕರೊಂದಿಗೆ ಪ್ರಗತಿಪರಿಶೀಲನಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.