HomePage_Banner
HomePage_Banner
HomePage_Banner
HomePage_Banner

ಕೊಡಾಜೆ: ವಾಹನಗಳ ಮಧ್ಯೆ ಸರಣಿ ಅಪಘಾತ-ದ್ವಿಚಕ್ರ ಸವಾರರಿಗೆ ಗಾಯ

ವಿಟ್ಲ: ನಾಲ್ಕು ವಾಹನಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ  ಬೈಕ್ ಸವಾರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ  ಕೊಡಾಜೆ ಮಸೀದಿ ಬಳಿ ನಡೆದಿದೆ.




ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಜೀಪು ಮತ್ತು  ಮಂಗಳೂರು ಕಡೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಆಲ್ಟೋ ಕಾರಿನ ನಡುವೆ  ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ಅಪಘಾತದ ತೀವ್ರತೆಗೆ ಜೀಪಿನ ಹಿಂದಿನಿಂದ  ಬರುತ್ತಿದ್ದ  ಬೈಕ್ ನಿಯಂತ್ರ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಗಾಯಗೊಂಡಿದ್ದಾರೆ‌.

ಕಾರಿನ ಹಿಂದಿನಿಂದ ಬರುತ್ತಿದ್ದ  ಆಕ್ಟೀವಾ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸಹಸವಾರ ಬಾಲಕ  ಸಣ್ಣಪುಟ್ಟ  ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.

ಬೈಕ್ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ನಾಲ್ಕೂ ವಾಹನಗಳು ನಜ್ಜು ಗುಜ್ಜಾಗಿದೆ. ಕೆಲವು ಹೊತ್ತು ವಾಹನ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದ್ದು, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.