HomePage_Banner
HomePage_Banner
HomePage_Banner
HomePage_Banner

ಪುತ್ತೂರು ನೇತ್ರಾವತಿ ಸ್ತ್ರೀಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಚಿನಾ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಳೆದ ಮೂರು ತಿಂಗಳ ಹಿಂದೆ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಪುತ್ತೂರಿನ ನೇತ್ರಾವತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಚಿನಾರವರು ಎ‌.10ರಂದು ನಿಧನರಾಗಿದ್ದಾರೆ.

ಕಳೆದ ಫೆಬ್ರವರಿ 7ರಂದು ತನ್ನ ಪತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಬಿ.ಸಿ.ರೋಡ್ ಬಳಿ ಬೈಕ್ ನಿಂದ ಬಿದ್ದಿದ್ದ ಸಚಿನಾರವರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಜೀವನ್ಮರಣ ಸ್ಥಿತಿಯಲ್ಲಿದ್ದ ಸಚಿನಾರವರು ಇದೀಗ ಕೊನೆಯುಸಿರೆಳೆದಿದ್ದಾರೆ. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಬಳಿಯ‌ ನಿವಾಸಿಯಾಗಿದ್ದ ಸಚಿನಾರವರಿಗೆ ಖಾಸಗಿ ಬಸ್ ಚಾಲಕರಾಗಿರುವ ಪೊಳಲಿಯ ದಯಾನಂದರವರೊಂದಿಗೆ ಮದುವೆಯಾಗಿದ್ದು ಎರಡು ವರ್ಷದ ಹೆಣ್ಣು ಮಗುವಿದೆ. ಸಚಿನಾರವರು ಕಳೆದ ಏಳು ವರ್ಷಗಳಿಂದ ನೇತ್ರಾವತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ‌ ಕಾರ್ಯ ನಿರ್ವಹಿಸುತ್ತಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.