HomePage_Banner
HomePage_Banner
HomePage_Banner
HomePage_Banner

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು, ಪಾಪೆಮಜಲು ಸರಕಾರಿ ಪ್ರೌಢಶಾಲೆ ಸಹಯೋಗ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಾರ್ಗದರ್ಶಿ, ಎಸ್‌ಎಸ್‌ಎಲ್‌ಸಿ ನಂತರ ಮುಂದೇನು? ವಿಶೇಷ ಸಂವಾದ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ವತಿಯಿಂದ ಪಾಪೆಮಜಲು ಸರಕಾರಿ ಪ್ರೌಢಶಾಲೆ ಸಹಯೋಗದೊಂದಿಗೆ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಾರ್ಗದರ್ಶಿ ಹಾಗೂ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು? ವಿಶೇಷ ಸಂವಾದ ಕಾರ್ಯಕ್ರಮ ಎ.೧೦ರಂದು ನಡೆಯಿತು.


ಉಜಿರೆ ಎಸ್‌ಡಿಎಂ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ರವರು ಸಂಪನ್ಮೂಲ ವ್ಯಕ್ತಿಯಾಗಿ ಸಂವಾದ ನಡೆಸಿಕೊಟ್ಟರು. ಪಾಪೆಮಜಲು ಸರಕಾರಿ ಪ್ರೌಢಶಾಲಾ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಹಾರೈಸಿದರು. ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಯೂಸುಫ್ ರೆಂಜಲಾಡಿ ಪ್ರಾಸ್ತಾವಿಕ ಮಾತನಾಡಿದರು.


ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಸ್ವಾಗತಿಸಿದರು. ಎಸ್‌ಡಿಎಂಸಿ ಸದಸ್ಯ ಅಮ್ಮಣ್ಣ ರೈ, ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯ ಶಿವಕುಮಾರ್ ಈಶ್ವರಮಂಗಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಹರ್ಷಿತಾ ಕೆ. ವಂದಿಸಿದರು. ಶಿಕ್ಷಕಿಯರಾದ ಶಾಲೆಟ್ ಜೇನ್ ರೆಬೆಲ್ಲೋ, ಸ್ವಾತಿ, ನಮಿತಾ ಕೆ., ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.