HomePage_Banner
HomePage_Banner
HomePage_Banner
HomePage_Banner

ನಿಡ್ಪಳ್ಳಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರೇಬಿಸ್ ರೋಗದ ವಿರುದ್ಧ ಉಚಿತ ಲಸಿಕಾ ಕಾರ್ಯಕ್ರಮ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ದ.ಕ ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಾಣಾಜೆ, ಗ್ರಾಮ ಪಂಚಾಯತ್ ನಿಡ್ಪಳ್ಳಿ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಕುಕ್ಕುಪುಣಿ ಹಾಲು ಉತ್ಪಾದಕರ ಸಹಕಾರ ಸಂಘ, ತಂಬುತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಸೇರ್ತಾಜೆ ಹಾಲು ಉತ್ಪಾದಕರ ಸಹಕಾರ ಸಂಘ, ಶಾಂತದುರ್ಗಾ ಯುವಕ ಮಂಡಲ ಚೂರಿಪದವು ಇವುಗಳ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ರೋಗದ ವಿರುದ್ಧ ಉಚಿತ ಲಸಿಕಾ ಕಾರ್ಯಕ್ರಮವನ್ನು ಏ.12 ರಂದು  ಗ್ರಾಮ ಪಂಚಾಯತ್ ನಲ್ಲಿ ಉದ್ಘಾಟಿಸಲಾಯಿತು.

ತಾಲೂಕು ಪಂಚಾಯತ್  ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ದೀಪ ಬೆಳಗಿಸಿ ಉ‍ದ್ಘಾಟಿಸಿ ಶುಭ ಹಾರೈಸಿದರು.ತಾಲೂಕು ಪಂಚಾಯತ್ ಸದಸ್ಯ ಹರೀಶ್ ಬಿಜತ್ರೆ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಮಾತನಾಡಿ ಶುಭ ಹಾರೈಸಿದರು. ಪಂಚಾಯತ್ ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ ಅಧ್ಯಕ್ಷತೆ ವಹಿಸಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಮುರಳೀಕೃಷ್ಣ ಮುಂಡೂರು ಪ್ರಾರ್ಥಿಸಿ ಪಶುವೈದ್ಯ ಆಸ್ಪತ್ರೆಯ ಡಾ.ಪ್ರಕಾಶ್ ಸ್ವಾಗತಿಸಿದರು.ಪುತ್ತೂರು ಪಶುವೈದ್ಯ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಸನ್ನ ಕುಮಾರ್ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವರಾಮ ವಂದಿಸಿ ಪಾಣಾಜೆ ಪಶುವೈದ್ಯ ಆಸ್ಪತ್ರೆಯ ಜಾನುವಾರು ಅಧಿಕಾರಿ ಪುಷ್ಪರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕೌಡಿಚಾರು ಪಶುವೈದ್ಯ ಆಸ್ಪತ್ರೆಯ ಪರೀಕ್ಷಕ ವೀರಪ್ಪ ಹಾಗೂ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.ಪಂಚಾಯತ್ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡರು. ನಂತರ ಗ್ರಾಮ ಪಂಚಾಯತ್ ವ್ಯಾಪ್ತಿಯ 12 ಕಡೆ ಲಸಿಕಾ ಶಿಬಿರ ನಡೆಯಿತು.
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.