HomePage_Banner
HomePage_Banner
HomePage_Banner
HomePage_Banner

ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಯಲ್ಲಿ ಡಾ| ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಯಲ್ಲಿ ಎ.೧೪ ರಂದು ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಹೆಚ್.ಕೆ ಪ್ರಕಾಶ್ ಹಾಗೂ ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಂಶುಪಾಲರಾದ  ಜೋಸ್ ಎಂ.ಜೆ ಯವರು ಡಾ| ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ  ಜೋಸ್ ಎಂ.ಜೆ ಯವರು ಅಂಬೇಡ್ಕರ್‌ರವರ ದೂರದರ್ಶಿತ್ವದ ನಿಲುವುಗಳ ಬಗ್ಗೆ ಉಲ್ಲೇಖಿಸಿ ಅವರ ಕನಸುಗಳನ್ನು ನನಸಾಗಿಸುವಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು. ೧೦ ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ನಿಕಿತಾ ಶೆಣೈ ದಿನದ ಮಹತ್ವದ ಬಗ್ಗೆ ಮಾತನಾಡಿದರು.


ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ೧೦ ನೇ ತರಗತಿಯ ವಿದ್ಯಾರ್ಥಿಗಳಾದ  ಯುಕ್ತ ಸ್ವಾಗತಿಸಿ, ಭವಿಷ್ಯ ವಂದಿಸಿದರು. ಕುಮಾರಿ ವೈಭವಿ ನಿರೂಪಿಸಿದರು. ಈ ಕಾರ್ಯಕ್ರಮದ ನಂತರ ೧೦ ನೇ ತರಗತಿಯ ವಿದ್ಯಾರ್ಥಿಗಳಿಗೆ ಡಾ| ಅಂಬೇಡ್ಕರ್ ಜಯಂತಿಯ ಅಂಗವಾಗಿ ಅವರ ಜೀವನ ಶೈಲಿ ಹಾಗೂ ಭಾರತದ ಸಂವಿಧಾನದ ಕುರಿತಂತೆ ರಸಪ್ರಶ್ನೆ ಕಾರ್ಯಕ್ರಮವನ್ನು ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕಿ ಶಶಿಕಲಾ ಇವರು ನಡೆಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.