HomePage_Banner
HomePage_Banner

ರಾಷ್ಟ್ರದ ಪ್ರಗತಿಗೆ ಮುನ್ನುಡಿ ಬರೆದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದ : ಸ್ವಾಮಿ ಪ್ರಕಾಶಾನಂದಜಿ

ಪುತ್ತೂರು: “ಭಾರತದ ಪ್ರಗತಿಗೆ ಮುನ್ನುಡಿ ಬರೆದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಪ್ರತಿಷ್ಠಾತ ಸಂಸ್ಥೆಗಳನ್ನು ಪ್ರಾರಂಭಿಸಲು ಪ್ರೇರಣೆ ನೀಡಿದರು. ವ್ಯಕ್ತಿ ನಿರ್ಮಾಣದ ಜೊತೆಯಲ್ಲೇ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಸ್ವಾಮೀಜಿ ನಂಬಿದ್ದರು” ಎಂದು ಸ್ವಾಮಿ ಪ್ರಕಾಶಾನಂದಜಿ ನುಡಿದರು.

ಮಂಗಳೂರು ವಿಶ್ವವಿದ್ಯಾಲ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ಮೂರನೇ ಉಪನ್ಯಾಸ ಮಾಲಿಕೆ “ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ” ಎಂಬ ವಿಷಯದ ಬಗ್ಗೆ ಮಂಗಳೂರಿನ ಎಸ್. ಡಿ. ಎಮ್. ಸ್ನಾತಕೋತ್ತರ ವ್ಯವಹಾರ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಣೆಬೆನ್ನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಪ್ರಕಾಶಾನಂದಜಿ ಸ್ವಾಮಿ ವಿವೇಕಾನಂದರು ಯುವಕರಿಗೆ ನೀಡಿದ ಸಂದೇಶವನ್ನು ಯುವ ಮನಸ್ಸುಗಳಿಗೆ ತಿಳಿಸಿಯಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಕೆ. ರಮೇಶ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಮಂಗಳೂರಿನ ಎಸ್. ಡಿ. ಎಮ್. ಸ್ನಾತಕೋತ್ತರ ವ್ಯವಹಾರ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸೀಮಾ ಶೆಣೈ ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಚಾಲಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಪಿ. ಸ್ವಾಗತಿಸಿ, ಮಂಗಳೂರು ರಾಮಕೃಷ್ಣ ಮಠದ ಸ್ವಯಂಸೇವಕ ರಂಜನ್ ಬೆಳ್ಳರ್ಪಾಡಿ ವಂದಿಸಿದರು, ರಮ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಸ್ ಎಸ್. ಡಿ. ಎಮ್. ಕಾಲೇಜಿನ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.