HomePage_Banner
HomePage_Banner
HomePage_Banner
HomePage_Banner

ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ಆಲಿ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಚ್. ಮಹಮ್ಮದ್ ಆಲಿ ನೇಮಕಗೊಂಡಿದ್ದಾರೆ. ಈ ಮೂಲಕ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ಬಣದಿಂದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿಯವರ ಬಣಕ್ಕೆ ಶಿಫ್ಟ್ ಆದ ಬಳಿಕ ಮಹಮ್ಮದ್ ಆಲಿಯವರು ಪ್ರಮುಖ ಹುದ್ದೆ ಅಲಂಕರಿಸಿದ್ದಾರೆ. ಪುತ್ತೂರು ಪುರಸಭೆ ಮತ್ತು ನಗರಸಭೆಯಲ್ಲಿ ವಿಪಕ್ಷ ನಾಯಕರಾಗಿ ಕಾರ್‍ಯ ನಿರ್ವಹಿಸಿದ್ದ ಎಚ್.ಮಹಮ್ಮದ್ ಆಲಿಯವರು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್‍ಯದರ್ಶಿಯಾಗಿಯೂ ಕಾರ್‍ಯ ನಿರ್ವಹಿಸುತ್ತಿದ್ದಾರೆ. ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈಯವರು ನಗರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಪಕ್ಷದ ನಾಯಕರು ಅಂಗೀಕರಿಸಿದ್ದು ತೆರವಾದ ಸ್ಥಾನಕ್ಕೆ ಮಹಮ್ಮದ್ ಆಲಿಯವರನ್ನು ನೇಮಕ ಮಾಡಿದ್ದಾರೆ. ಪ್ರಸ್ತುತ ನಗರಸಭಾ ವ್ಯಾಪ್ತಿಯ ಪಾಂಗ್ಲಾಯಿಯಲ್ಲಿ ವಾಸ್ತವ್ಯ ಇರುವ ಎಚ್. ಮಹಮ್ಮದ್ ಆಲಿಯವರನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್‌ರವರ ಸೂಚನೆಯೊಂದಿಗೆ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಆದೇಶಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.