HomePage_Banner
HomePage_Banner
HomePage_Banner
HomePage_Banner

ಶ್ರೀ ಕ್ಷೇತ್ರ ಪಡುಮಲೆಯ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಕೋಟಿ- ಚೆನ್ನಯರ ಜನ್ಮಸ್ಥಾನ ಹಾಗೂ ಮೂಲಸ್ಥಾನವಾದ ಶ್ರೀ ಕ್ಷೇತ್ರ ಪಡುಮಲೆಯಲ್ಲಿ ಎ.೨೨ರಿಂದ ೨೪ರವರೆಗೆ ನಡೆಯುವ ಶ್ರೀ ನಾಗಬೆರ್ಮೆರ ಗುಡಿ, ನಾಗ ಸನ್ನಿಧಿ, ರಕ್ತೇಶ್ವರಿ, ತೀರ್ಥಬಾವಿ ಹಾಗೂ ದೇಯಿ ಬೈದೆದಿ ಸಾನಿಧ್ಯ(ಸಮಾಧಿ)ಯ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಉಪ್ಪಿನಂಗಡಿಯಲ್ಲಿ ಶನಿವಾರ ಜರಗಿತು.

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದ ಬಳಿಕ ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಪಡುಮಲೆ ಕೋಟಿ- ಚೆನ್ನಯ ಜನ್ಮಸ್ಥಾನ ಸಂಚಾಲನಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ವಿಜಯಕುಮಾರ್ ಸೊರಕೆ ಮಾತನಾಡಿ, ಪಡುಮಲೆಯು ಕೋಟಿ- ಚೆನ್ನಯರ ಜನ್ಮಭೂಮಿಯಾಗಿದ್ದು, ಅಲ್ಲಿರುವ ಸಾನಿಧ್ಯಗಳನ್ನು ನಾವೆಲ್ಲಾ ಒಗ್ಗೂಡಿ ಟ್ರಸ್ಟ್ ರಚಿಸಿ ಅದರ ಮೂಲಕ ಅಭಿವೃದ್ಧಿ ಪಡಿಸಿದ್ದೇವೆ. ಇದೇ ಎ.೨೨ರಿಂದ ೨೪ರವರೆಗೆ ನವೀಕೃತ ದೈವಸ್ಥಾನಗಳ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರವನ್ನು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ, ಉಪ್ಪಿನಂಗಡಿ ಪೇಟೆಯಲ್ಲಿ ವಿತರಿಸಲಿದ್ದೇವೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವರದರಾಜ್ ಎಂ., ಬಿಜೆಪಿ ಯುವ ಮುಖಂಡ ಸುನೀಲ್ ಕುಮಾರ್ ದಡ್ಡು, ಶ್ರೀ ಕ್ಷೇತ್ರ ಪಡುಮಲೆ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಅನಿಲ್ ಕುಮಾರ್ ಉಪ್ಪಿನಂಗಡಿ, ಉಪಾಧ್ಯಕ್ಷ ಸುಧಾಕರ ಶೆಟ್ಟಿ ಉಪ್ಪಿನಂಗಡಿ, ನೀರಾವರಿ ಸಮಿತಿ ಸಂಚಾಲಕ ಗುಣಕರ ಅಗ್ನಾಡಿ, ಹಸಿರುವಾಣಿ ಸಮಿತಿಯ ಸಹಸಂಚಾಲಕ ವೇದನಾಥ ಸುವರ್ಣ, ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಹರಿರಾಮಚಂದ್ರ, ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ರಾವ್, ಪ್ರಮುಖರಾದ ಸತೀಶ್ ಪಿಲಿಗೂಡು, ಮೋಹಿತ್ ಸಾಲ್ಯಾನ್ ಮುಗ್ಗ, ಧೀರಜ್ ಸಾಲ್ಯಾನ್, ಚಂದ್ರಶೇಖರ ಶೆಟ್ಟಿ, ಚಂದ್ರ ಕುರುಬರಪಾಲು, ಅಭಿಜಿತ್ ಶೆಟ್ಟಿ ಕೊಪ್ಪದಬೆಟ್ಟು, ಕಂಗ್ವೆ ವಿಶ್ವನಾಥ ಶೆಟ್ಟಿ, ಚಂದ್ರಶೇಖರ ಮಾಂಡೋವಿ, ರಾಮಚಂದ್ರ ಗೌಡ ಅರ್ಬಿ, ಗೋಪಾಲಕೃಷ್ಣ, ಐ. ಪುರುಷೋತ್ತಮ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.