HomePage_Banner
HomePage_Banner
HomePage_Banner
HomePage_Banner

ಕಾಣಿಯೂರಿನಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸಂಸದ ನಳಿನ್‌ರವರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರಿನಲ್ಲಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಬಿಜೆಪಿ ರಾಜಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಕಾಣಿಯೂರಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಬೆಂಗಳೂರು- ಮಂಗಳೂರು ನಡುವೆ ಪ್ರತಿದಿನ ಮೂರು ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಎ ೧೦ರಿಂದ ಪ್ರಾರಂಭವಾದರೂ ಕಾಣಿಯೂರು ಸುತ್ತಮುತ್ತಲಿನ ಹಲವು ಊರುಗಳಿಗೆ ಕೇಂದ್ರ ಸ್ಥಾನವಾಗಿ, ಸಂಪರ್ಕಕೊಂಡಿಯಂತಿರುವ ಹಾಗೂ ರಾಜ್ಯ ಹೆದ್ದಾರಿಗೆ ಬಹಳ ಹತ್ತಿರವಾಗಿರುವ ಕಾಣಿಯೂರಿನ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳು ನಿಲ್ಲುವ ನಿರೀಕ್ಷೆಯಲ್ಲಿದ್ದ ಕಾಣಿಯೂರು ಭಾಗದ ಜನತೆ ನಿಲುಗಡೆ ಭಾಗ್ಯ ಸಿಗದೇ ಇರುವುದರಿಂದ ನಿಲುಗಡೆಗೆ ಒತ್ತಾಯಿಸಿ ಸಂಸದರಿಗೆ ಮನವಿ ಮಾಡಲಾಗಿದೆ.. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರಾಜೇಶ್ ಮೀಜೆ, ಗ್ರಾ.ಪಂ. ಸದಸ್ಯರಾದ ತಾರಾನಾಥ ಇಡ್ಯಡ್ಕ, ತೇಜಕುಮಾರಿ ಉದ್ಲಡ್ಡ, ಗ್ರಾ.ಪಂ. ಮಾಜಿ ಸದಸ್ಯರಾದ ಸುರೇಶ್ ಓಡಬಾಯಿ, ವೀರಪ್ಪ ಗೌಡ ಉದ್ಲಡ್ಡ, ಸುಂದರ ಬೆದ್ರಾಜೆ, ಲಕ್ಷ್ಮಣ ಗೌಡ ಮುಗರಂಜ, ಪರಮೇಶ್ವರ ಅನಿಲ ಮೊದಲಾದವರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.