HomePage_Banner
HomePage_Banner
HomePage_Banner
HomePage_Banner

ತಾ.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ದೇವರ ದಾಸಿಮಯ್ಯ ಜಯಂತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಕೋವಿಡ್-೧೯ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಯಂತಿಗಳನ್ನು ಅತ್ಯಂತ ಸರಳವಾಗಿ ಮತ್ತು ಸಾಂಕೇತಿಕವಾಗಿ ನಡೆಸುವಂತೆ ಸರಕಾರದ ಸೂಚನೆಯಂತೆ ಎ.೧೭ರಂದು ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ತಹಶೀಲ್ದಾರ್ ರಮೇಶ್ ಬಾಬು ದೀಪ ಬೆಳಗಿಸಿ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪುಷಾರ್ಚಣೆ ಮಾಡಿದರು. ಗ್ರೇಡ್ ೨ ತಹಶೀಲ್ದಾರ್ ಲೋಕೇಶ್, ಉಪತಹಶೀಲ್ದಾರ್ ಶಶಿಕಲಾ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

ಉಪತಹಶೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ದಯಾನಂದ ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.