HomePage_Banner
HomePage_Banner
HomePage_Banner
HomePage_Banner

ಪುತ್ತೂರು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸ್ವಂತ ಕಟ್ಟಡ ಒದಗಿಸಬೇಕು – ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಘದಿಂದ ಶಾಸಕರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಶಾಲೆಯಿಂದ ಹೊರಗುಳಿದ ೧೮ ವರ್ಷದ ಕೆಳಗಿನ ಮಕ್ಕಳ ಸಮೀಕ್ಷೆ ನಡೆಸಲು ಅಸಾಧ್ಯದ ಕುರಿತು ಹಾಗೂ ಪುತ್ತೂರು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸ್ವಂತ ಕಟ್ಟಡ ಒದಗಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಪುತ್ತೂರು ಶಾಸಕ ಸಂಜೀವ ಮಠಂದೂರುರವರಿಗೆ ಮನವಿ ಸಲ್ಲಿಸಲಾಯಿತು.

ಶಾಲೆಯಿಂದ ಹೊಗುಳಿದ ೧೮ ವರ್ಷದ ಕೆಳಗಿನ ಮಕ್ಕಳ ಸಮೀಕ್ಷೆ ನಡೆಸಲು ಗ್ರಾಮ ಪಂಚಾಯತ್‌ನಿಂದ ಕಾರ್ಯಕರ್ತೆಯರಿಗೆ ಒತ್ತಡ ಹೇರಲಾಗುತ್ತಿದೆ. ಈ ಬಗ್ಗೆ ನಾವು ಸಮೀಕ್ಷೆಯನ್ನು ಮಾಡಲು ಅಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮೊಬೈಲ ಆಪ್ ಮೂಲಕ ಕುಟುಂಬ ಸಮೀಕ್ಷೆಯನ್ನು ಕೈಗೊಳ್ಳುವ ಬಗ್ಗೆ ಕಾರ್ಯಕರ್ತೆ ಸಹಾಯಕಿಯರ ಸಂಘದ ಸಭೆಯಲ್ಲಿ ಚರ್ಚಿಸಿ ಸಮೀಕ್ಷೆ ಮಾಡುವುದನ್ನು ಖಂಡಿಸಲಾಗಿದೆ. ಇಲಾಖೇತರ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ನ್ಯಾಯಾಲಯದ ತೀರ್ಪು ಬರುವವರೆಗೆ ಇಲಾಖೇತರ ಕೆಲಸ ಕಾರ್ಯಗಳಿಗೆ ಒತ್ತಡ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪುತ್ತೂರು ಯೋಜನೆಗೆ ಸ್ವಂತ ಕಟ್ಟಡ ಇರುವುದಿಲ್ಲ. ದರ್ಬೆಯ ಸ್ತ್ರೀಶಕ್ತಿ ಭವನದಲ್ಲಿ ಬಾಡಿಗೆ ನೆಲೆಯಲ್ಲಿ ಇಲಾಖೆಯು ಕೆಲಸ ನಿರ್ವಹಿಸುತ್ತಿದ್ದು ದುರ್ಬಲ ವರ್ಗದವರಿಗೆ ಹಾಗೂ ಮಹಿಳೆಯರಿಗೆ ಕಛೇರಿಯನ್ನು ಸಂಪರ್ಕಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ ಇಲಾಖೆಗೆ ಶೀಘ್ರ ಸ್ವಂತ ಕಟ್ಟಡ ವ್ಯವಸ್ಥೆಗೆ ಅನುದಾನ ಒದಗಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕತೆಯರ ಮತ್ತು ಸಹಾಯಕಿಯರ ಜಿಲ್ಲಾ ಸಂಘದ ಉಪಾಧ್ಯಕ್ಷೆ ವಿಜಯ ಈಶ್ವರ ಗೌಡ, ಪುತ್ತೂರು ತಾಲೂಕು ಸಂಘದ ಸಲಹೆಗಾರೆ ತಾರಾ ಬಲ್ಲಾಳ್, ಅಧ್ಯಕ್ಷೆ ಮಲ್ಲಿಕಾ ಎಸ್.ಆಳ್ವ, ಮಾಜಿ ಅಧ್ಯಕ್ಷೆ ಮೀನಾಕ್ಚಿ ಶಾಂತಿನಗರ, ಕೋಶಾಧಿಕಾರಿ ರಮಾ ಹಾಗೂ ಕಾರ್ಯದರ್ಶಿ ಶುಭವತಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.