HomePage_Banner
HomePage_Banner
HomePage_Banner
HomePage_Banner

ಪುತ್ತೂರು ಜಾತ್ರೆಯ ವರ್ಷಾವಧಿ ಉತ್ಸವ – ಬ್ರಹ್ಮರಥೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1



ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವವು ಏ.೧೭ರಂದು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಸರಕಾರದ ಕೋವಿಡ್ ನಿಯಮಕ್ಕೆ ತಕ್ಕಂತೆ ಸೀಮಿತಿ ಭಕ್ತರಿಂದ ಶ್ರೀ ದೇವರ ರಥ ಎಳೆಯಲಾಯಿತು.

ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ಆರಂಭದಲ್ಲಿ ಬ್ರಹ್ಮರಥ ಸೇವೆ ನೀಡಿದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. 

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಮತ್ತು ಸದಸ್ಯರ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು. ಬ್ರಹ್ಮರಥೋತ್ಸವದ ಮೊದಲು ನಡೆದ ಆಕರ್ಷಕ ಸುಡುಮದ್ದು ಪ್ರದರ್ಶನದ ‘ಪುತ್ತೂರು ಬೆಡಿ’ ಸಂಪ್ರದಾಯಕ್ಕೆ ತಕ್ಕಂತೆ ಪ್ರದರ್ಶನ ನಡೆಯಿತು. ಈ ಭಾರಿ ಕೋವಿಡ್ ನಿಯಮಾನುಸಾರ ಸಂಪ್ರದಾಯಕ್ಕೆ ಚ್ಯುತಿ ಭಾರದಂತೆ ೧.೫೦ ಲಕ್ಷ ವೆಚ್ಚದ ಸುಡುಮದ್ದು ಪ್ರದರ್ಶನ ನಡೆಯಿತು.

ಏ.೧೭ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ಉತ್ಸವ, ಕಟ್ಟೆಪೂಜೆ, ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಸಂಜೆ ದೇವರ ಮತ್ತು ಉಳ್ಳಾಲ್ತಿ ಅಮ್ಮನವರ ಉತ್ಸವ ನಡೆಯಿತು. ಬಳಿಕ ಬ್ರಹ್ಮರಥದ ಬಳಿ ಕಾಜುಕುಜುಂಬ ದೈವದ ನುಡಿಗಟ್ಟು ನಡೆದು ದೇವರು ರಥಾರೂಢರಾದರು. ಬಳಿಕ ಪುತ್ತೂರು ಬೆಡಿ ಆರಂಭವಾಯಿತು. ಸುಮಾರು ೧ ಗಂಟೆ ಕಾಲ ಸುಡುಮದ್ದು ಪ್ರದರ್ಶನ ನಡೆದು ರಾತ್ರಿ ಗಂಟೆ ೯.೪೫ಕ್ಕೆ ವೇಳೆ ಬ್ರಹ್ಮರಥದ ಮುಂದೆ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ಡಾ. ಸುಧಾ ಎಸ್ ರಾವ್, ವೀಣಾ ಬಿ.ಕೆ. ರಾಮಚಂದ್ರ ಕಾಮತ್, ರಾಮ್‌ದಾಸ್ ಗೌಡ, ಶೇಖರ್ ನಾರಾವಿ, ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ,  ದೇವಳದ ಮಾಜಿ ಆಡಳಿತ ಮೊಕ್ತೇಸರ ಎನ್.ಕೆ. ಜಗನ್ನಿವಾಸ ರಾವ್, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಕರುಣಾಕರ ರೈ, ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ತಿಮ್ಮಪ್ಪ ಗೌಡ, ಮಾಜಿ ಸದಸ್ಯ ಚಿದಾನಂದಬೈಲಾಡಿ ಅವರು ತೆಂಗಿನ ಕಾಯಿ ಒಡೆದರು. ಬಳಿಕ ಬ್ರಹ್ಮರಥೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಬ್ರಹ್ಮರಥೋತ್ಸವ ಸೇವಾರ್ಥಿಗಳಿಗೆ ತಂತ್ರಿಗಳು ಪ್ರಸಾದ ನೀಡಿದರು. ಬಳಿಕ ಭಕ್ತಾದಿಗಳು ಶ್ರೀ ಮಹಾಲಿಂಗೇಶ್ವರನಿಗೆ ಭಕ್ತಿಪೂರ್ವಕ ಜಯಕಾರ ಹಾಕುತ್ತಾ ರಥ ಎಳೆದರು. ಬ್ರಹ್ಮರಥ ರಥಬೀದಿಯಲ್ಲಿ ಸಾಗಿ ಮಧ್ಯೆ ತಂತ್ರಿಗಳು ರಥದಿಂದ ಇಳಿದು ಮೂಲ ನಾಗನ ಕಟ್ಟೆಯಲ್ಲಿ ತಂತ್ರ ತೂಗಿ ಬಂದರು. ಬ್ರಹ್ಮರಥದಿಂದ ಇಳಿದ ಶ್ರೀ ದೇವರು ಬಂಗಾರ್ ಕಾಯರ್‌ಕಟ್ಟೆ ಸವಾರಿಯ ಬಳಿಕ ಅಂಕೆತ್ತಿಮಾರ್ ಕಟ್ಟೆಯಲ್ಲಿ ಶ್ರೀ ದೇವರು ಕಟ್ಟೆ ಪೂಜೆ ಸ್ವೀಕರಿಸಿ ಶ್ರೀ ದಂಡ ನಾಯಕ ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆಯ ಬಳಿಕ ಶ್ರೀ ದೇವರು ದೇವಳದ ಒಳಗೆ ಪ್ರವೇಶ, ಶಯನ ನಡೆಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.