HomePage_Banner
HomePage_Banner
HomePage_Banner
HomePage_Banner

ಎ.19: ಪುಣಚ ಗ್ರಾಮ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ ೨೦೨೧-೨೨ ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಎ.೧೯ ರಂದು ಬೆಳಿಗ್ಗೆ ಗ್ರಾಮ ಪಂಚಾಯತ್‌ನ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಲಿದೆ.ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಪೂಜಾರಿಯವರ ಸಭಾಧ್ಯಕ್ಷತೆಯಲ್ಲಿ ನಡೆಯಲಿರುವ ಗ್ರಾಮ ಸಭೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ. ಪುಣಚ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಎಲ್ಲಾ ಮತದಾರರು ಗ್ರಾಮ ಸಭೆಯಲ್ಲಿ ಭಾಗವಹಿಸಿ ಗ್ರಾಮಾಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ನೀಡುವ ಮೂಲಕ ಸರಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಹ ಫಲಾನುಭವಿಗಳ ಗುರುತಿಸುವಿಕೆಗೆ ಸಹಕರಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಲಾವಣ್ಯ ಪಿ, ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ್ ಮತ್ತು ಸರ್ವ ಸದಸ್ಯರ ಪ್ರಕಟಣೆ ತಿಳಿಸಿದೆ. ಸರಕಾರದ ಆದೇಶದಂತೆ ಗ್ರಾಮ ಸಭೆಯಲ್ಲಿ ಭಾಗವಹಿಸುವ ಎಲ್ಲಾ ಗ್ರಾಮಸ್ಥರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕರಿಸುವಂತೆ ಗ್ರಾಪಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.